HomePage_Banner
HomePage_Banner
HomePage_Banner
HomePage_Banner

ಯುವತಿ ಜೊತೆ ಡಿ.ವಿ.ಯವರದ್ದೆನ್ನಲಾದ ವಿಡಿಯೋ ಕಾಲ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಅಶ್ಲೀಲ ವಿಡಿಯೋ ವೈರಲ್: ವಿಡಿಯೋದಲ್ಲಿರುವ ವ್ಯಕ್ತಿ ನಾನಲ್ಲ-ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮಕೈಗೊಳ್ಳಿ: ಪೊಲೀಸ್ ಕಮಿಷನರ್‌ಗೆ ಡಿ.ವಿ.ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರೂ ಆಗಿರುವ ಡಿ.ವಿ.ಸದಾನಂದ ಗೌಡರು ಯುವತಿಯೋರ್ವರೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿದ್ದು ಎನ್ನಲಾದ ಅಶ್ಲೀಲ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಕಾನೂನು ಕ್ರಮಕೈಗೊಳ್ಳುವಂತೆ ಡಿ.ವಿ.ಸದಾನಂದ ಗೌಡರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

 

‘ ನನ್ನ ವಿರುದ್ಧ ಫ್ಯಾಬ್ರಿಕೇಟೆಡ್, ಫೇಕ್ ಮಿಶ್ರಿತ ವಿಡಿಯೋ ಒಂದನ್ನು ಮಾಡಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದೆ,ನನ್ನ ಇಮೇಜ್ ಹಾಳು ಮಾಡಲೆಂದು ಈ ವಿಡಿಯೋ ಹರಿಬಿಡಲಾಗಿದೆ.ಈ ವಿಡಿಯೋದಲ್ಲಿರುವ ವ್ಯಕ್ತಿ ನಾನಲ್ಲ,ಇಂಪರ್ಸೊನೇಷನ್ ಮೂಲಕ ಈ ವಿಡಿಯೋ ಸಿದ್ದಪಡಿಸಲಾಗಿದೆ.ಈ ವಿಡಿಯೋ ಒಬ್ಬರಿಂದ ಒಬ್ಬರಿಗೆ ಹೋಗುವ ಮುನ್ನ ಕ್ರಮ ಕೈಗೊಳ್ಳಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಡಿ.ವಿ.ಯವರು ಆಗ್ರಹಿಸಿದ್ದಾರೆ.ಬೆಂಗಳೂರು ಉತ್ತರ ಪೊಲೀಸ್ ಉಪ ಆಯುಕ್ತರಿಗೆ ಮತ್ತು ಆರ್.ಟಿ.ನಗರ ಸಹಾಯಕ ಪೊಲೀಸ್ ಆಯುಕ್ತರಿಗೂ ಅವರು ಈ ಕುರಿತು ದೂರು ನೀಡಿ ಅಗತ್ಯ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

‘ಅಶ್ಲೀಲ ವೀಡಿಯೋದಲ್ಲಿರುವುದು ನಾನಲ್ಲ’- ಸದಾನಂದ ಗೌಡ ಟ್ವೀಟ್
ಪ್ರಕರಣಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸದಾನಂದ ಗೌಡ, ‘ಇದು ಮಾರ್ಫ್ ಮಾಡಿರುವ ವೀಡಿಯೋವಾಗಿದ್ದು, ನನ್ನ ವ್ಯಕ್ತಿತ್ವವನ್ನು ಹಾಳು ಮಾಡಲು ಇದನ್ನು ನಿರ್ಮಿಸಲಾಗಿದೆ.ಈ ವೀಡಿಯೋದಲ್ಲಿರುವುದು ನಾನಲ್ಲ’ ಎಂದು ಹೇಳಿದ್ದಾರೆ.

 

 

ತಮ್ಮ ಅಧಿಕೃತ ಖಾತೆಯ ಮೂಲಕ ಟ್ವೀಟ್ ಮಾಡಿರುವ ಡಿವಿಯವರು, “ಆತ್ಮೀಯ ಹಿತೈಷಿಗಳೇ, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಆ ವೀಡಿಯೋದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ.ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ.ನನಗೆ ನಂಬಿಕೆ ಇದೆ, ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೇ, ನಾನು ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ’ ಎಂದು ಟ್ವೀಟ್ ಮಾಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.