HomePage_Banner
HomePage_Banner
HomePage_Banner
HomePage_Banner

ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಮಿತಿಯ ವಿವಿಧ ವಲಯಗಳ ಪದಾಧಿಕಾರಿಗಳು ಮಾಸಿಕ ವರದಿಯನ್ನು ಮಂಡಿಸಿದರು. ಅತ್ತುತ್ತಮವಾಗಿ ಕಾರ್ಯನಿರ್ವಹಣೆ ಮಾಡಿದ ವಲಯಗಳ ಪದಾಧಿಕಾರಿಗಳನ್ನು ಮತ್ತು ಅತ್ಯುತ್ತಮ ಕೆಲಸ ಮಾಡಿದ ವಲಯಗಳನ್ನು ಗುರುತಿಸಲಾಯಿತು. ಜೊತೆಗೆ ಕಾಂಗ್ರೆಸ್ ಮೂಲಕ ಹಮ್ಮಿಕೊಳ್ಳಲಾಗುವ ಮುಂದಿನ ಹೋರಾಟಗಳು, ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಇದೇ ವೇಳೆ ಜಿಲ್ಲಾ ಸಮಿತಿಗೆ ಆಯ್ಕೆಯಾದ ಪ್ರಮುಖರನ್ನು ಶಾಲು ಹಾಕಿ ಅಭಿನಂದಿಸಲಾಯಿತು.


ಕೆಪಿಸಿಸಿ ಸಂಯೋಜಕರಾದ ರಮೇಶ್ ಮಾತನಾಡಿ, ಪ್ರತಿನಿತ್ಯ ಪುತ್ತೂರು ಬ್ಲಾಕ್ ಕಾಂಗ್ರೆಸ್‌ನ ಕಾರ್ಯಚಟುವಟಿಕೆಗಳನ್ನು ಗಮನಿಸಿಕೊಂಡು ಬರುತ್ತಿದ್ದೇನೆ. ಪುತ್ತೂರು ಬ್ಲಾಕ್‌ನಷ್ಟು ಸಂಘಟನಾತ್ಮಕವಾಗಿ ಕೆಲಸ ಮಾಡುತ್ತಿರುವುದನ್ನು ಕಾಂಗ್ರೆಸ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ನೋಡುತ್ತಿದ್ದೇನೆ ಎಂದು ಶ್ಲಾಘಿಸಿದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಅಧ್ಯಕ್ಷರನ್ನು ಆಯ್ಕೆ ಮಾಡುವ ವಿಚಾರದಲ್ಲಿ ರಾಜ್ಯಮಟ್ಟದಲ್ಲೇ ವಿಳಂಬವಾಗಿದೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಾಡುತ್ತಿರುವ ಕೆಲಸವನ್ನು ರಾಜ್ಯಕ್ಕೆ ತಿಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.


ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಅಲಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶುಕೂರ್ ಹಾಜಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಬಡಗನ್ನೂರು, ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್, ಕಾರ್ಮಿಕ ಘಟಕದ ಅಧ್ಯಕ್ಷ ಶರೂನ್ ಸಿಕ್ವೇರಾ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಪಾಣಾಜೆ ಮತ್ತಿತರರು ಉಪಸ್ಥಿತರಿದ್ದರು.


About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.