HomePage_Banner
HomePage_Banner
HomePage_Banner
HomePage_Banner

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅತ್ಯುತ್ತಮ ರೀತಿಯಲ್ಲಿ ಸಂಘಟನೆ – ಕೆಪಿಸಿಸಿ ಸಂಯೋಜಕ ಟಿ.ಪಿ ರಮೇಶ್ ಮೆಚ್ಚುಗೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪಕ್ಷ ಸಂಘಟನೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅತ್ಯುತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಸಂಯೋಜಕರು, ಪುತ್ತೂರು ಬ್ಲಾಕ್‌ನ ಉಸ್ತುವವಾರಿಯಾಗಿರುವ ಟಿ.ಪಿ ರಮೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.

ಸೆ.25ರಂದು ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಲಾಕ್ ಎಲ್ಲಾ ವಲಯ, ಗ್ರಾಮ ಸಮಿತಿ, ಬೂತ್ ಸಮಿತಿಗಳ ರಚನೆ, ತಟಸ್ಥವಾಗಿದ್ದ ಹಿರಿಯ ಕಾಂಗ್ರೆಸ್ಸಿಗರನ್ನು ಭೇಟಿ ಮಾಡಿ ಅವರನ್ನು ಮತ್ತೆ ಪಕ್ಷದಲ್ಲಿ ಸಕ್ರೀಯರಾಗುವಂತೆ ಕೈಗೊಂಡು ಕಾರ್ಯಕ್ರಮಗಳು ಅದ್ಬುತವಾಗಿದೆ. ಯುವ ಕಾಂಗ್ರೆಸ್, ಮಹಿಳಾ, ಎಸ್‌ಸಿ, ಎಸ್ಟಿ ಘಟಕ ಸೇರಿದಂತೆ ಎಲ್ಲಾ ಘಟಕಗಳ ರಚನೆ ಕ್ಲಪ್ತ ಸಮಯದಲ್ಲಿ ರಚನೆಗೊಂಡು ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ. ಪಕ್ಷ ಸಂಘಟನೆಯಲ್ಲಿ ಕಾಂಗ್ರಸ್ ಪಕ್ಷ ಹೊಸ ಚೈತನ್ಯದೊಂದಿಗೆ ಕಾರ್ಯೋಣ್ಮುಖವಾಗಿದೆ. ಕೆಪಿಸಿಸಿಯ ಸೂಚನೆಯಂತೆ ಎಲ್ಲಾ ಕೆಲಸ ಕಾರ್ಯಗಳನ್ನು ಮುಗಿಸಿದ್ದು ಶೇ.80 ಎಲ್ಲಾ ಸಂಘಟನೆಗೆ ಸಂಬಂಧಿಸಿ ಎಲ್ಲಾ ಕೆಲಸ ಕಾರ್ಯಗಳು ಪೂರ್ಣಗೊಂಡಿದ್ದು ಶೇ.೨೦ರಷ್ಟು ಬಾಕಿಯಿದ್ದು ಅ.೩೦ರೊಳಗೆ ಪೂರ್ಣಗೊಳ್ಳಲಿದೆ ಎಂದರು.

ವಿನೂತನ ರೀತಿಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಬ್ಲಾಕ್ ಕಾಂಗ್ರೆಸ್ ಪಕ್ಷದ ಹಿರಿಯರನ್ನು ಗುರುತಿಸಿ ಗೌರವಿಸಿದೆ. ಬೂತ್, ಗ್ರಾಮ, ವಲಯ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಬಲೀಷ್ಠವಾಗಿ ಹೊರ ಹೊಮ್ಮಿದ್ದು ಮುಂದಿನ ಚುನಾವಣೆಯನ್ನು ಎದುರಿಸಲು ಸಿದ್ದವಾಗಿದೆ. ಪಕ್ಷವನ್ನು ಮತ್ತಷ್ಟು ಬಲೀಷ್ಠಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿಯ ಸೂಚನೆಯಂತೆ ಮುಂದಿನ ದಿನಗಳಲ್ಲಿ ಪ್ರತಿ ವಲಯಗಳಿಗೆ ಪ್ರಜಾಪ್ರತಿನಿಧಿಗಳ ನೇಮಕ ಮಾಡಲಾಗುವುದು ಎಂದರು.

ಬಿಜೆಪಿ ಆಡಳಿತ ದುರಾಡಳಿತದಿಂದ ಕೂಡಿದ್ದು ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್ ಬೆಲೆ ದುಪ್ಪಟ್ಟು ಮಾಡಿದ್ದಾರೆ. ಆಡಳಿತ ವ್ಯವಸ್ಥೆಯನ್ನು ಸರಿದೂಗಿಸಲು ಜನರ ಮೇಲೆ ತೆರಿಗೆಯ ಹೊರೆ ಹೊರಿಸುತ್ತಿದೆ. ಜನರ ಮೇಲಿನ ತೆರಿಗೆಯನ್ನು ಆಯಾ ರಾಜ್ಯ ಸರಕಾರಗಳು ಇಳಿಕೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಪರಿಶಿಷ್ಟ ಜಾತಿಗೆ ಸೇರಿದ ಸಣ್ಣ ಮಗುವೊಂದು ದೇವಸ್ಥಾನದ ಒಳ ಪ್ರವೇಶಿಸಿರುವುದಕ್ಕೆ ಅಲ್ಲಿ ಆ ಮಗುವಿಗೆ ರೂ.೨೫,೦೦೦ ದಂಡ ವಿಧಿಸಿದೆ. ಇದರ ವಿರುದ್ಧ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ವತಿಯಿಂದ ಸೆ.27 ರಂದು ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ರೈತರ ಹೋರಾಟಕ್ಕೆ ಕಾಂಗ್ರೆಸ್‌ನ ಸಂಪೂರ್ಣ ಬೆಂಬಲವಿದೆ ಎಂದು ಅವರು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ವಿಎಚ್‌ಎ ಶಕೂರ್ ಹಾಜಿ, ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಜಯಂತಿ ಬಲ್ನಾಡ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.