HomePage_Banner
HomePage_Banner
HomePage_Banner
HomePage_Banner

ಕೋವಿಡ್ ಸಂಕಷ್ಟದಲ್ಲಿ ರಕ್ತದ ಕೊರತೆ ನೀಗಿಸಲು ರಕ್ತದಾನ ಅಗತ್ಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಡಾ. ಯತೀಶ್ ಉಳ್ಳಾಲ್

ಪುತ್ತೂರು : ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ರಕ್ತದ ಕೊರತೆ ನೀಗಿಸಲು ರಕ್ತದಾನ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಕಾರ್ಯ ಎಂದು ಪುತ್ತೂರು ಲಯನ್ಸ್ ಹಾಲ್ ನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ , ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಹೇಳಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ಶಾಖೆಯ ಆಶ್ರಯದಲ್ಲಿ ಲೇಡಿಗೋಶನ್ ಬ್ಲಡ್ ಬ್ಯಾಂಕ್ ಮಂಗಳೂರು ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಸಹಯೋಗದಲ್ಲಿ ಲಯನ್ಸ್ ಕ್ಲಬ್ ಹಾಲ್‌ನಲ್ಲಿ ಸೆ.೨೫ರಂದು ಆಯೋಜಿಸಲಾದ ರಕ್ತದಾನ ಶಿಬಿರವನ್ನು ಸ್ವಯಂ ರಕ್ತದಾನ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ರಕ್ತದಾನ ಶ್ರೇಷ್ಠ ದಾನವಾಗಿದ್ದು, ಮಾನವೀಯತೆಯ ಸಂದೇಶದ ಜೊತೆಗೆ ಜೀವವನ್ನುಳಿಸಿದ ಹಿರಿಮೆ ರಕ್ತದಾನಿಯದ್ದಾಗುತ್ತದೆ ಎಂದರು.

ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಅಧ್ಯಕ್ಷ ಮಧು ನರಿಯೂರು ಅವರು ಮಾತನಾಡಿ, ಸಾಮಾಜಿಕ ಕಳಕಳಿಯೊಂದಿಗೆ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು ಯುವಜನತೆ ರಕ್ತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಬೇಕು ಎಂದರು. ರೆಡ್ ಕ್ರಾಸ್ ಸಂಸ್ಥೆಯ ಚೇರ್ ಮೆನ್ ಆಸ್ಕರ್ ಆನಂದ್ ಮಾತನಾಡಿ, ಪುತ್ತೂರು ಬ್ಲಡ್ ಬ್ಯಾಂಕ್ ಪುತ್ತೂರಿನ ಆಸುಪಾಸಿನ ರಕ್ತದ ಅವಶ್ಯಕತೆಯನ್ನು ಪೂರೈಸುತ್ತಿದೆ, ಜಿಲ್ಲಾ ಕೇಂದ್ರವಾದ ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಲೇಡಿಗೋಷನ್ ಬ್ಲಡ್ ಬ್ಯಾಂಕ್ ಮಂಗಳೂರಿನ ಆಸ್ಪತ್ರೆಗಳಲ್ಲಿ ದಾಖಲಾಗುವ ಪುತ್ತೂರು ಸೇರಿದಂತೆ ಜಿಲ್ಲೆಯ ಎಲ್ಲೆಡೆಯ ರೋಗಿಗಳ ರಕ್ತದಾನದ ಅಗತ್ಯತೆಯನ್ನು ಪೂರೈಸಿದೆ.

ಈ ಹಿನ್ನೆಲೆಯಲ್ಲಿ ಎರಡೂ ಬ್ಲಡ್ ಬ್ಯಾಂಕ್ ಗಳ ಸಹಯೋಗದಲ್ಲಿ ರೆಡ್ ಕ್ರಾಸ್ ವತಿಯಿಂದ ಈ ರಕ್ತದಾನ ಶಿಬಿರ ಆಯೋಜಿಸಿರುವುದಾಗಿ ತಿಳಿಸಿದರು. ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎ.ಜೆ.ರೈ, ಪುತ್ತೂರು ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ.ರಾಮಚಂದ್ರ, ಲೇಡಿಗೋಷನ್ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ.ಜಿ.ಎನ್.ಭಟ್, ಪುತ್ತೂರು ರೆಡ್ ಕ್ರಾಸ್ ಸಂಸ್ಥೆಯ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರಾದ ಸಂತೋಷ್ ಶೆಟ್ಟಿ, ಪದ್ಮನಾಭ ಶೆಟ್ಟಿ, ಡಾ.ಸುರೇಶ್ ಪುತ್ತೂರಾಯ, ರಫೀಕ್ ದರ್ಬೆ, ಭುಜಂಗ ಆಚಾರ್ಯ, ನವೀನ್ ಚಂದ್ರ ನಾಯಕ್ , ಜಯಪ್ರಕಾಶ್ ಹೆಚ್.ಎಲ್, ಅಬ್ದುಲ್ ರಹಿಮಾನ್ ಯುನಿಕ್,ಪ್ಯಾಟ್ರಿಕ್ ಸಿಪ್ರಿಯನ್, ಜೋ ಡಿಸೋಜ, ಈ ಸಂದರ್ಭ ಉಪಸ್ಥಿತರಿದ್ದರು. ರೆಡ್ ಕ್ರಾಸ್ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಸುರೇಶ್ ಪುತ್ತೂರಾಯ ಸಹಿತ ೫೭ ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಶಿಬಿರದ ಯಶಸ್ಸಿಗೆ ಕಾರಣರಾದರು. ಮೌನೇಶ ವಿಶ್ವಕರ್ಮ, ಅಶ್ರಫ್ ಪಿ.ಎಂ. ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.