HomePage_Banner
HomePage_Banner
HomePage_Banner
HomePage_Banner

ಕೋಡಿಂಬಾಡಿ : ಅನಧಿಕೃತ ಅಂಗಡಿ ತೆರವುಗೊಳಿಸುವಂತೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ, ಎ.ಸಿ.ಯವರಿಗೆ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಕೋಡಿಂಬಾಡಿ ಗ್ರಾಮದ ಮುಖ್ಯರಸ್ತೆಯಲ್ಲಿರುವ ಅನಧಿಕೃತ ಅಂಗಡಿ ತೆರವುಗೊಳಿಸಬೇಕೆಂದು ಕೋಡಿಂಬಾಡಿ ಜಿನ ನಿವಾಸದ ಹರ್ಷೇಂದ್ರ ಜೈನ್ ರವರು ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಕೋಡಿಂಬಾಡಿ ಗ್ರಾಮ ಪಂಚಾಯತ್, ಪುತ್ತೂರು ಲೋಕೋಪಯೋಗಿ ಇಲಾಖೆ, ಪುತ್ತೂರು ತಹಶೀಲ್ದಾರ್, ಸಹಾಯಕ ಕಮಿಷನರ್‌ರವರಿಗೆ ಮನವಿ ನೀಡಿದ್ದಾರೆ.

ಕೋಡಿಂಬಾಡಿ ಗ್ರಾಮದ ಮುಖ್ಯರಸ್ತೆಯಲ್ಲಿ ಬಾಬು ಗೌಡ ಎಂಬವರು ಅನಧಿಕೃತವಾಗಿ ಕಟ್ಟಡ ನಿರ್ಮಿಸಿ ಯಾವುದೇ ಉದ್ಯಮ ಪರವಾನಿಗೆ ಪಡೆಯದೆ ವ್ಯಾಪಾರ ನಡೆಸುತ್ತಿದ್ದಾರೆ. ಅಂಗಡಿಯ ಎದುರು ಬೀಡಿ, ಸಿಗರೇಟು, ಜರ್ದಾ ಮುಂತಾದವುಗಳನ್ನು ತಿಂದು ಮಾರ್ಗಕ್ಕೆ ಉಗುಳುವುದು, ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ. ಸದ್ರಿ ಕಟ್ಟಡದ ಹಿಂಭಾಗದಲ್ಲಿ ನ್ಯಾಯಬೆಲೆ ಅಂಗಡಿ ಮತ್ತು ಸಾರ್ವಜನಿಕ ರಯಿದ್ದು ಘನವಾಹನ ಪಡಿತರ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ. ಈ ಅಂಗಡಿಯ ಸಮೀಪ ಸಾರ್ವಜನಿಕ ಬಸ್ಸು ತಂಗುದಾಣವಿದ್ದು ಮಹಿಳೆಯರಿಗೆ, ಮಕ್ಕಳಿಗೆ ಕುಳಿತುಕೊಳ್ಳಲು ಮುಜುಗರ ಉಂಟಾಗುತ್ತಿದೆ. ಕೂಡಲೇ ಈ ಅನಧಿಕೃತ ಅಂಗಡಿ ತೆರವುಗೊಳಿಸಿ ಬಾಬು ಗೌಡರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಕೂಡ ಮನವಿ ಸಲ್ಲಿಸಲಾಗಿದೆ ಎಂದು ಹರ್ಷೇಂದ್ರ ಜೈನ್‌ರವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.