HomePage_Banner
HomePage_Banner
HomePage_Banner
HomePage_Banner

ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗ ಕಚೇರಿಯ ದಶಮಾನೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ದಶಮಾನೋತ್ಸವ ಕಾರ್ಯಕ್ರಮವು ಸೆ.28ರಂದು ಅಪರಾಹ್ನ ಮುಕ್ರಂಪಾಡಿಯ ವಿಭಾಗೀಯ ಕಚೇರಿಯ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಿವೃತ್ತ ನೌಕರರನ್ನು ಸನ್ಮಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಈ ಭಾಗದಲ್ಲಿ ಉತ್ತರ ಕರ್ನಾಟಕ ಭಾಗದವರೇ ನಿಗಮದಲ್ಲಿ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ತವರು ಜಿಲ್ಲೆಗೆ ವರ್ಗಾಯಿಸಿದರೆ ಇಲ್ಲಿ ಸಿಬ್ಬಂದಿ ಕೊರತೆ ಉಂಟಾಗುತ್ತದೆ. ಇದಕ್ಕಾಗಿ ಕೆಎಸ್‌ಆರ್‌ಟಿಸಿಯಲ್ಲಿ ಆಯಾ ವಿಭಾಗವಾರು ಸ್ಥಳೀಯ ನೇಮಕಾತಿ ಪದ್ದತಿಯನ್ನು ಮರು ಆರಂಭಿಸುವ ಕುರಿತು ಸಾರಿಗೆ ಸಚಿವರಲ್ಲಿ ಚರ್ಚಿಸಲಾಗಿದೆ. ಈ ಕುರಿತು ಚಿಂತನೆ ನಡೆಸಲಾಗಿದೆ ಎಂದರು. ಕೊರೊನಾದಿಂದಾಗಿ ಕೆಎಸ್‌ಆರ್‌ಟಿಸಿಯು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು ನಿವೃತ್ತ ನೌಕರರ ಸೌಲಭ್ಯ, ಮಾಸಿಕ ವೇತನ ನೀಡಲು ಸ್ವಲ್ಪ ಕಷ್ಟವಾಗುತ್ತಿದೆ. ಆದರೆ ಸರ್ಕಾರ ನೌಕರರ ಹಿತಾಸಕ್ತಿಯನ್ನು ಕಾಯ್ದುಕೊಳ್ಳಲು ಬದ್ಧವಾಗಿದೆ. ನಿಗಮದ ನೌಕರರು ಈ ವಿಚಾರವನ್ನು ಅರಿತುಕೊಂಡು ಸಂಸ್ಥೆ ಹಾಗೂ ಸಕರಾರದೊಂದಿಗೆ ಸಹಕರಿಸಬೇಕು. ನಮ್ಮ ಸರ್ಕಾರವು ಒಟ್ಟು ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಸಚಿವರು ಹೇಳಿದರು.


ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೆಸ್ಸಾರ್ಟಿಸಿ ವಿಭಾಗೀಯ ತಾಂತ್ರಿಕ ಶಿಲ್ಪಿ ಆಶಾಲತಾ ಉಪಸ್ಥಿತರಿದ್ದರು. ಬಿಎಂಎಸ್ ಮನವಿಗೆ ಸ್ಪಂಧನೆ ಕೆಎಸ್‌ಆರ್‌ಟಿಸಿ ನೌಕರರ ಸಮಸ್ಯೆಯ ಕುರಿತಂತೆ ಸಚಿವ ಅವರಿಗೆ ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಸಂಘದ ಪುತ್ತೂರು ವಿಭಾಗದ ವತಿಯಿಂದ ಮನವಿ ಸಲ್ಲಿಸಲಾಯಿತು. ಮತ್ತು ಸಂಘಟನೆಯ ವತಿಯಿಂದ ಹಾರಾರ್ಪಣೆ ಮಾಡಿ ಸಚಿವರು ಹಾಗೂ ಶಾಸಕರನ್ನು ಗೌರವಿಸಲಾಯಿತು. ಮನವಿಗೆ ಉತ್ತರಿಸಿದ ಸಚಿವ ಅಂಗಾರರವರು, ಮನವಿಯ ಕುರಿತು ಸರ್ಕಾರಿ ಮಟ್ಟದಲ್ಲಿ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದರು.


ಸನ್ಮಾನ:
ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ 25 ಮಂದಿ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸುದ್ದಿ ಬಿಡುಗಡೆ ಆಯೋಜಿಸಿದ ಆನ್‌ಲೈನ್ ಓಟಿಂಗ್‌ನಲ್ಲಿ ಪ್ರಥಮ ಸ್ಥಾನ ಪಡೆದ ಸಂಚಾರ ನಿಯಂತ್ರಕ ಸತ್ಯಶಂಕರ ಭಟ್, ಪುತ್ತೂರು ವಿಭಾಗೀಯ ಸಂಚಲನಾಧಿಕಾರಿ ಮುರಳೀಧರ ಆಚಾರ್ಯರವರನ್ನು ಸಚಿವರು ಗೌರಿವಿಸಿದರು. ಸಚಿವ ಎಸ್. ಅಂಗಾರ ಮತ್ತು ಪುತ್ತೂರು ವಿಭಾಗೀಯ ಕಚೇರಿ ಪ್ರಾರಂಭವಾಗುವಲ್ಲಿ ಮುತುವರ್ಜಿ ವಹಿಸಿದ್ದ ಶಾಸಕ ಸಂಜೀವ ಮಠಂದೂರುರವರನ್ನು ಕೆಎಸ್‌ಆರ್‌ಟಿಸಿ ವತಿಯಿಂದ ಸನ್ಮಾನಿಸಲಾಯಿತು. ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಕೆ. ಜಯಕರ ಶೆಟ್ಟಿ ಸ್ವಾಗತಿಸಿದರು. ವಿಭಾಗ ಸಂಚಲನಾ ಅಧಿಕಾರಿ ಮುರಳೀಧರ ಆಚಾರ್ಯ ವಂದಿಸಿದರು. ರಮೇಶ್ ಶೆಟ್ಟಿ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.