ಪುತ್ತೂರು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಸಾಲ, ಬಡ್ಡಿ ಮನ್ನಾ ಮಾಡುವಂತೆ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ, ಸಹಕಾರ ಸಚಿವರಿಗೆ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರಿನಲ್ಲಿರುವ ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘಕ್ಕೆ ಸರಕಾರವು ನೀಡಿರುವ ರೂ. 1 ಕೋಟಿ ಸಾಲದ ಅಸಲು ಮತ್ತು ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡುವ ಕುರಿತು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಮನವಿ ಮಾಡಲಾಯಿತು.

ಮತ್ತೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಮತ್ತೂರು ಪಟ್ಟಣದಲ್ಲಿ 1961ರಲ್ಲಿ ಪ್ರಾರಂಭಗೊಂಡ ಮತ್ತೂರು ತಾಲ್ಲೂರು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತ ಸಂಸ್ಥೆಯು ಕೃಷಿಕರ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಿ ಸದಸ್ಯರಿಗೆ ಯೋಗ್ಯ ದರದಲ್ಲಿ ಲಾಭ ಒದಗಿಸುವ ಉದ್ದೇಶದಿಂದ ಸ್ಥಾಪನೆಯಾಗಿದೆ. ರೈತರಿಗೆ ಉತ್ತಮ ಸೇವೆಯನ್ನು ತೃಪ್ತಿಕರವಾಗಿ ನೀಡುತ್ತಿದ್ದ ಸಂಸ್ಥೆಯು, ಕೃಷಿ ಉತ್ಪನ್ನಗಳ ಬೆಲೆಗಳ ಏರಿಳಿತದಿಂದಾಗಿ ಅನಿರೀಕ್ಷಿತವಾಗಿ ನಷ್ಟವನ್ನು ಅನುಭವಿಸಿ, ಆರ್ಥಿಕವಾಗಿ ದುರ್ಬಲಗೊಂಡಿದೆ. ಈ ಸಂದರ್ಭದಲ್ಲಿ ಸಹಕಾರಿ ಸಂಘವನ್ನು ಮನಶ್ವೇತನಗೊಳಿಸುವ ನಿಟ್ಟಿನಲ್ಲಿ 2014ರಂದು ಆಗಿನ ಮುಖ್ಯಮಂತ್ರಿಗಳಾಗಿದ್ದ ಡಿ.ವಿ.ಸದಾನಂದ ಗೌಡ ಅವರ ಅವಧಿಯಲ್ಲಿ ರೂ. 1 ಕೋಟಿ ಸಾಲವನ್ನು ಶೇ.10ರ ವಾರ್ಷಿಕ ಬಡ್ಡಿ ದರದಲ್ಲಿ ಮಂಜೂರು ಮಾಡಿತ್ತು. ಇದರಿಂದಾಗಿ ಸಂಘದ ಆರ್ಥಿಕ ಪರಿಸ್ಥಿತಿಯು ಚೇತರಿಕೆಯ ಹಂತದಲ್ಲಿದ್ದು, ಒಟ್ಟು ಕ್ರೋಢೀಕೃತ ನಷ್ಟ ರೂ. 48.29 ಲಕ್ಷ ಇಳಿಕೆಯಾಗಿದೆ. ಆದರೆ ಸರಕಾರವು ನೀಡಿದ ಸಾಲ ಮತ್ತು ಬಡ್ಡಿಯ ಹೊಣೆಯನ್ನು ಭರಿಸುವಷ್ಟು ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲದ ಕಾರಣ, ಸಾಲ ಮತ್ತು ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡುವಂತೆ ಅವರು ಮನವಿಯಲ್ಲಿ ವಿನಂತಿಸಿಕೊಂಡಿದ್ದಾರೆ. ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ರೈ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಈ ಸಂದರ್ಭದಲ್ಲಿ ಜೊತೆಗಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.