ಯಶುಭ ರೈ ಕೈಕಾರವರಿಗೆ ಸಾಹಿತ್ಯಮಂದಾರ ರಾಜ್ಯ ಪ್ರಶಸ್ತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಂಗಳೂರಿನ ಆನಂದರಾವ್ ಸರ್ಕಲ್ ಎಸ್.ಜೆ.ಆರ್. ಶಿಕ್ಷಣ ಸೊಸೈಟಿಯ ಸರಾಫ್ ಬಸಪ್ಪ ಆಡಿಟೋರಿಯಂನಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರಿನ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರುರವರು ಯಶುಭ ರೈ ಕೈಕಾರರವರಿಗೆ ಸಾಹಿತ್ಯ ಮಂದಾರ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಧರ್ಮದರ್ಶಿ ಹರಿಕೃಷ್ಣ ಪುನರೂರುರವರ ನೇತೃತ್ವದಲ್ಲಿ ಜ್ಞಾನ ಮಂದಾರ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದು ಶಿಕ್ಷಕಿಯರ ತರಬೇತಿಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ. ಸಂಸ್ಥೆಯ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ಉತ್ತಮ ಪ್ರತಿಭಾ ಪ್ರದರ್ಶನ ನೀಡಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.

ಯಶುಭ ರೈ ಕೈಕಾರ ರವರು ಪುತ್ತೂರಿನ ಪುರಂದರ ರೈ ಮತ್ತು ಲಲಿತ ರೈ ದಂಪತಿ ಪುತ್ರಿಯಾಗಿದ್ದು, ಕೈಕಾರ ಗಿರೀಶ್ ರೈರವರ ಪತ್ನಿಯಾಗಿರುತ್ತಾರೆ.ಶ್ರೀ ಜಗದ್ಗುರು ರೇಣುಕಾಚಾರ್ಯ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾಗಿರುವ ಸೋಮಶೇಖರ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ಕರ್ನಾಟಕ ಸಹಕಾರ ಮಹಾಮಂಡಲದ ಮಾಜಿ ಅಧ್ಯಕ್ಷ ಡಾ. ಶೇಖರ ಗೌಡ ಪಾಟೀಲ್, ಆರ್.ಎನ್. ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ. ಸುದೀರ್ ಪೈ, ಸಹಕಾರ ಮಹಾಮಂಡಲದ ಸಿ.ಇ.ಒ ಗುರುಪ್ರಸಾದ್, ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್, ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವೇದಮೂರ್ತಿ, ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾಗಿ ಕೆ.ಟಿ. ವಿಶ್ವನಾಥ ಮೊದಲಾದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.