ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದ ನಿಯೋಗ – ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಭೇಟಿ, ಮನವಿ ಸಲ್ಲಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ನದಿ ದಂಡೆಯಲ್ಲಿರುವ ಉಪ್ಪಿನಂಗಡಿ ಗ್ರಾಮದ ದ್ರವ ಹಾಗೂ ಘನ ತ್ಯಾಜ್ಯ ನಿರ್ವಹಣೆಗೆ ರಾಜ್ಯ ಸರಕಾರದಿಂದ ವಿಶೇಷ ಅನುದಾನವನ್ನು ಒದಗಿಸಬೇಕೆಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದ ನಿಯೋಗ, ಪುತ್ತೂರು ಶಾಸಕ ಸಂಜೀವ ಮಟಂದೂರು ಮೂಲಕ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖಾ ಸಚಿವ ಈಶ್ವರಪ್ಪರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ದ.ಕ. ಜಿಲ್ಲೆಯ ಜೀವ ನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳ ದಡದಲ್ಲಿರುವ ಉಪ್ಪಿನಂಗಡಿ ಪೇಟೆಯು ದಿನೇ ದಿನೇ ಅಭಿವೃದ್ಧಿ ಹೊಂದುತ್ತಿದ್ದು, ಪೇಟೆಯ ದ್ರವ ತ್ಯಾಜ್ಯಗಳು ನದಿ ಸೇರುವ ಸ್ಥಿತಿ ಉದ್ಭವಿಸಿದೆ. ಇದನ್ನು ತಡೆಗಟ್ಟಬೇಕಾದರೆ ದ್ರವ ತ್ಯಾಜ್ಯ ನಿರ್ವಹಣೆಗೆ ಅಗತ್ಯ ಅನುದಾನವನ್ನು ಒದಗಿಸಬೇಕೆಂದು ಲಿಖಿತ ಮನವಿಯಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಮುಳಿಯ ನೇತೃತ್ವದ ನಿಯೋಗದಲ್ಲಿ ಪಂಚಾಯಿತಿ ಸದಸ್ಯರಾದ ಸುರೇಶ್ ಅತ್ರಮಜಲು, ಧನಂಜಯ ನಟ್ಟಿಬೈಲ್, ಸ್ಥಳೀಯರಾದ ರವಿನಂದನ್ ಹೆಗ್ಡೆ ಇದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.