ನವೆಂಬರ್ 1ರಿಂದ ಸಮಸ್ತ ಮದರಸಗಳು ಪ್ರಾರಂಭ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಕೋವಿಡ್-19 ನಿಯಂತ್ರಣಗಳ ಹಿನ್ನೆಲೆಯಲ್ಲಿ 2020 ಮಾರ್ಚ್ 10ರಿಂದ ಮುಚ್ಚಲ್ಪಟ್ಟಿರುವ ಮದರಸಗಳು ಕೋವಿಡ್ ನಿಯಾಮಾನುಸಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ನವೆಂಬರ್ 1ರಿಂದ ಮದರಸಗಳನ್ನು ಪ್ರಾರಂಭಿಸಲು ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಕಾರ್ಯಕಾರಿ ಸಮಿತಿ ಸಭೆ ನಿರ್ಧರಿಸಿದೆ. ಅದರಂತೆ ನವೆಂಬರ್ 1ರಿಂದಲೇ ಮದರಸಗಳು ತೆರೆದು ಕಾರ್ಯಾಚರಿಸಲಿದೆ ಎಂದು ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಸ್ತ ಶಿಕ್ಷಣ ಮಂಡಳಿಯ ಅಧೀನದಲ್ಲಿ ಹತ್ತು ಸಾವಿರದ ಮುನ್ನೂರ ಹದಿನಾರು (10316) ಮದರಸಗಳು ಕಾರ್ಯನಿರ್ವಹಿಸುತ್ತಿವೆ. ಒಂದೂವರೆ ವರ್ಷದಿಂದ ಆನ್‌ಲೈನ್ ತರಗತಿಗಳ ಮೂಲಕ ಶಿಕ್ಷಣವನ್ನು ಪಡೆಯುತ್ತಿದ್ದ 12 ಲಕ್ಷ ವಿದ್ಯಾರ್ಥಿಗಳು ನವೆಂಬರ್ 1ರಿಂದ ಆಫ್‌ಲೈನ್‌ನಲ್ಲಿ ಅಧ್ಯಯನ ಮಾಡಲು ಸಿದ್ಧತೆ ನಡೆಸಿದ್ದಾರೆ. ಮದರಸಾಗಳನ್ನು ತೆರೆಯುವ ಮುನ್ನ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮದ್ರಸ ಆಡಳಿತ ಸಮಿತಿಗಳಿಗೆ ಸಭೆ ನಿರ್ದೇಶಿಸಿದೆ.

ತರಗತಿಗಳು ಮತ್ತು ಸುತ್ತಮುತ್ತಲಿನ ಪರಿಸರಗಳನ್ನು ಸ್ವಚ್ಛವಾಗಿಡಬೇಕು. ತರಗತಿಗಳನ್ನು ನಡೆಸಲು ಸಾಕಷ್ಟು ಅಧ್ಯಾಪಕರ ಉಪಸ್ಥಿತಿಯನ್ನು ಖಚಿತಪಡಿಸಿ ಕೊಳ್ಳಬೇಕು. ಸರ್ಕಾರ ಸೂಚಿಸಿದ ಕೋವಿಡ್ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಅನುಸರಿಸಬೇಕು. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೋವಿಡ್ ಸೋಂಕಿತರು ಅಥವಾ ರೋಗ ಲಕ್ಷಣಗಳನ್ನು ಹೊಂದಿರುವವರು ತರಗತಿಗಳಿಗೆ ಹಾಜರಾಗುವುದನ್ನು ತಪ್ಪಿಸಬೇಕು. ಅಂತಹ ವಿದ್ಯಾರ್ಥಿಗಳು ತಮ್ಮ ಆನ್‌ಲೈನ್ ಅಧ್ಯಯನವನ್ನು ಮನೆಯಲ್ಲಿಯೇ ಮುಂದುವರಿಸಬಹುದು. ಮದರಸ ಆಡಳಿತ ಸಮಿತಿಯವರು ಗೃಹ ಸಂದರ್ಶನ ಮಾಡಿ ಅಗತ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದು ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.