ಬಡಗನ್ನೂರು; ರೈತ ಕ್ಷೇತ್ರ ಪಾಠಶಾಲೆ- ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಬೆಟ್ಟಂಪಾಡಿ ವಲಯದ ಬಡಗನ್ನೂರು ಕಾರ್ಯಕ್ಷೇತ್ರದಲ್ಲಿ ನಡೆದ ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮದಲ್ಲಿ ಅಣಬೆ ಬೇಸಾಯದ ಬಗ್ಗೆ ಅ.1 ರಂದು  ಪಡುಮಲೆ ದೇವಸ್ಥಾನದಲ್ಲಿ ತರಬೇತಿ ಕಾರ್ಯಕ್ರಮ  ನಡೆಯಿತು.
ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಡಗನ್ನೂರು ಒಕ್ಕೂಟದ ಅಧ್ಯಕ್ಷೆ ವಸಂತಿ, ತಾಲೂಕಿನ ಭಜನಾ ಪರಿಷತ್ ಅಧ್ಯಕ್ಷ ಸುಬ್ಬಯ್ಯ ರೈ ಹಲಸಿನಡಿ,ನಿವೃತ್ತ ಶಿಕ್ಷಕ  ವಿಷ್ಣು ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿ, ರಮಾನಂದ ಬಲ್ಯಾಯ ಅಣಬೆ‌ ಬೇಸಾಯದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ‌ ತರಬೇತಿ ನೀಡಿದರು.


ಸೇವಾ ಪ್ರತಿನಿಧಿ ವಿಜಯಲಕ್ಷ್ಮಿ ಸ್ವಾಗತಿಸಿ, ಕೃಷಿ ಅಧಿಕಾರಿ ಉಮೇಶ್. ಬಿ ಪ್ರಾಸ್ತಾವಿಕವಾಗಿ ಮಾತನಾಡಿದರು.ವಲಯದ ಮೇಲ್ವಿಚಾರಕ ಶಿವಪ್ಪ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಒಟ್ಟು 38 ರೈತ  ಸದಸ್ಯರು ಭಾಗವಹಿಸಿದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.