ಹನಿನೀರಾವರಿ ಯೋಜನೆ ಅನುಷ್ಠಾನಗೊಳಿಸಲು ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : 2021-22ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮವಾದ ಹನಿನೀರಾವರಿ ಯೋಜನೆಯನ್ನು, ದಕ್ಷಿಣ ಕನ್ನಡ ಜಿಲ್ಲೆಯ ಅಧೀನಕ್ಕೆ ಸೇರಿದ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ತೋಟಗಾರಿಕೆ ಬೆಳೆಗಳಿಗೆ (ಕಾಫಿ, ಟಿ, ರಬ್ಬರ್ ಹೊರತುಪಡಿಸಿ) ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಮಾರ್ಗಸೂಚಿಯನ್ವಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಸಣ್ಣ ಅತಿಸಣ್ಣ ರೈತರಿಗೆ ಪ್ರಥಮ 2ಹೆಕ್ಟೇರ್ ಗೆ ನಿಗಧಿಪಡಿಸಿರುವ ವೆಚ್ಚದ ಶೇ.90ರಷ್ಟು ಸಹಾಯಧನವನ್ನು ಹಾಗೂ ನಂತರದ ಮೂರು ಹೆಕ್ಟೇರ್‌ಗೆ ಶೇ.೪೫ರಷ್ಟು ಸಹಾಯಧನವನ್ನು ನೀಡಲಾಗುವುದು ಮತ್ತು ಇತರೆ ವರ್ಗದ ರೈತರಿಗೆ ಶೇ.45ರಷ್ಟು ಸಹಾಯಧನವನ್ನು ಗರಿಷ್ಠ 5 ಹೆಕ್ಟೇರ್ ವರೆಗೂ ನೀಡಲಾಗುವುದು (ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ನೀಡಲಾಗುವುದು). ಸದರಿ ಸೌಲಭ್ಯವನ್ನು ಪ್ರತಿ ಫಲಾನುಭವಿ ಕುಟುಂಬಕ್ಕೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಖಆ ಸಂಖ್ಯೆ ಹೊಂದಿರುವ ಜಾತಿ ಪ್ರಮಾಣ ಪತ್ರವನ್ನು ಹಾಗೂ ಸಣ್ಣ ಮತ್ತು ಅತೀ ಸಣ್ಣ ರೈತರು ಕಂದಾಯ ಇಲಾಖೆಯಿಂದ ಸಣ್ಣ/ಅತೀ ಸಣ್ಣ ರೈತ ಪ್ರಮಾಣ ಪತ್ರ ಸಲ್ಲಿಸಬೇಕು.

ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ/ತಾಲ್ಲೂಕು ಕಛೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ಷ್ಮ ನೀರಾವರಿ ಘಟಕ ಅಳವಡಿಸಲು ತಾಲೂಕು ತೋಟಗಾರಿಕೆ ಕಛೇರಿಯಲ್ಲಿ ನಿಗದಿತ ಅರ್ಜಿಯನ್ನು ಪಡೆದು, ಹೆಸರು ನೋಂದಾಯಿಸಿ ಕಾರ್ಯಾದೇಶ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.