ವಿಟ್ಲ ತಾಲೂಕು ರಚನೆ ಪ್ರಸ್ತಾಪ – ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ರವರ ನೇತೃತ್ವದ ನಿಯೋಗದಿಂದ  ಶಾಸಕ ಸಂಜೀವ ಮಠಂದೂರುರವರ ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ:  ವಿಟ್ಲ ತಾಲೂಕು ರಚನೆಗೆ ಸಂಬಂಧಿಸಿದಂತೆ  ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರನ್ನು ವಿಟ್ಲ ಕ್ಷೇತ್ರದ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ರವರ ನೇತೃತ್ವದ ನಿಯೋಗ ಭೇಟಿಯಾಗಿ, ತಾಲೂಕಿನ ಕುರಿತಾಗಿ ಸಮಗ್ರ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಸಂಪೂರ್ಣ ವಿವರಗಳು ಇರುವ ಪತ್ರವನ್ನು ಶಾಸಕರಿಗೆ ಹಸ್ತಾಂತರಿಸಲಾಯಿತು. ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜಾ ರಾಧಾಕೃಷ್ಣ ಆಳ್ವ , ತಾಲೂಕು ರಚನಾ ಸಮಿತಿಯ ಪ್ರಮುಖರಾದ ರಾಜೀವ್ ಭಂಡಾರಿ, ಶ್ರೀಕೃಷ್ಣ ವಿಟ್ಲ, ಪುನೀತ್ ಮಾಡತ್ತಾರ್, ವಿಶ್ವನಾಥ ವೀರಕಂಭ, ಉದಯ ಕುಮಾರ್ ಆಲಂಗಾರ್, ಪದ್ಮನಾಭ ಕಟ್ಟೆ, ಹರಿಪ್ರಸಾದ್ ಯಾದವ್, ಶರತ್ ಎನ್ಎಸ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ಈ ಬಗ್ಗೆ ಶಾಸಕರು ಪೂರಕವಾಗಿ ಸ್ಪಂದಿಸಿ ತಾಲೂಕಿನ ರಚನೆಗೆ ತನ್ನ ಬೆಂಬಲ ನೀಡುವುದಾಗಿ ತಿಳಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.