ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿಯಿಂದ ಇನ್ನೊಂದು ಕೊಡುಗೆ -ಅ.4ರಂದು ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆ

ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಸಾರ್ವಜನಿಕ ಆರೋಗ್ಯ ಸೇವೆಗಾಗಿ ಖರೀದಿಸಿರುವ ನೂತನ ಆಂಬ್ಯುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮ ಅ.೪ರಂದು ಪುತ್ತೂರಿನಲ್ಲಿ ನಡೆಯಲಿದೆ. ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಬಿ.ಪಿ ಇಸ್ಮಾಯಿಲ್ ಹಾಜಿ ಬೈತಡ್ಕ ಅಧ್ಯಕ್ಷತೆ ವಹಿಸಲಿದ್ದು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ಡಿವೈಎಸ್‌ಪಿ ಡಾ.ಗಾನ ಪಿ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಶಾಫಿ ಸಅದಿ ಬೆಂಗಳೂರು, ಡಾ.ಶೈಕ್ ಬಾವ ಮಂಗಳೂರು, ಶುಹೈಬ್ ಭಾಯಿ ಮಂಗಳೂರು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿಯ ಗೌರವಾಧ್ಯಕ್ಷ ಪಿ.ಎಂ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ, ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ಅಧ್ಯಕ್ಷ ಮಹಮ್ಮದ್ ಹಾಜಿ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜೆಡಿಎಸ್ ಪುತ್ತೂರು ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ, ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್, ಜಿ.ಪಂ ಮಾಜಿ ಸದಸ್ಯ ಎಂ.ಎಸ್ ಮಹಮ್ಮದ್, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದಾಲಿ, ಉದ್ಯಮಿ ಝಿಯಾ ಮಂಗಳೂರು, ಹಜಾಜ್ ಗ್ರೂಪ್ಸ್‌ನ ಹನೀಫ್ ಹಾಜಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಬಿ.ಪಿ ಇಸ್ಮಾಯಿಲ್ ಹಾಜಿ ಬೈತಡ್ಕ, ಪ್ರಧಾನ ಕಾರ್ಯದರ್ಶಿ ವಿ.ಎಚ್ ಅಬ್ದುಲ್ ಶಕೂರ್ ಹಾಜಿ, ಕೋಶಾಧಿಕಾರಿ ಯೂಸುಫ್ ಹಾಜಿ ಕೈಕಾರ ತಿಳಿಸಿದ್ದಾರೆ.

ನಿರ್ವಹಣಾ ಸಮಿತಿ:
ಆಂಬ್ಯುಲೆನ್ಸ್ ಲೋಕಾರ್ಪಣಾ ಯೋಜನೆಯ ನಿರ್ವಹಣಾ ಸಮಿತಿಯ ಚೇರ್‌ಮೆನ್ ಹಾಜಿ ಮಹಮ್ಮದ್ ಕುಕ್ಕುವಳ್ಳಿ, ಕನ್ವೀನರ್ ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂರು, ಯೂಸುಫ್ ಗೌಸಿಯಾ ಸಾಜ, ಅಬ್ದುಲ್ ಜಲೀಲ್ ಬೈತಡ್ಕ, ಇಕ್ಬಾಲ್ ಬಪ್ಪಳಿಗೆ, ಯೂಸುಫ್ ಮೈದಾನಿಮೂಲೆ, ಬಿ.ಕೆ ರಶೀದ್ ಸಂಪ್ಯ ಮೊದಲಾದವರು ಕಾರ್ಯ ನಿರ್ವಹಿಸುತ್ತಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.