HomePage_Banner
HomePage_Banner
HomePage_Banner
HomePage_Banner

ತೆಂಕುತಿಟ್ಟಿನ ಪ್ರಸಿದ್ಧ ಭಾಗವತರು ‘ಗಾನಗಂಧರ್ವ’ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ‘ಗಾನಗಂಧರ್ವ’ರೆಂದೇ ಪ್ರಖ್ಯಾತಿ ಪಡೆದಿದ್ದ ಖ್ಯಾತ ಭಾಗವತ ಪದ್ಯಾಣ ಗಣಪತಿ ಭಟ್ ರವರು ಅ.12ರಂದು ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಅ.12ರಂದು ಬೆಳಗ್ಗೆ  ಹೃದಯಾಘಾತಕ್ಕೊಳಗಾಗಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಗಣಪತಿ ಭಟ್ ರವರು ಸುಮಾರು 4 ದಶಕಗಳಿಗೂ ಹೆಚ್ಚು ಕಾಲ ಯಕ್ಷರಂಗದಲ್ಲಿ ಭಾಗವತರಾಗಿದ್ದರು. ಸುರತ್ಕಲ್, ಕರ್ನಾಟಕ, ಹೊಸನಗರ, ಎಡನೀರು, ಹನುಮಗಿರಿ ಸೇರಿದಂತೆ ಹಲವು ಯಕ್ಷಗಾನ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು.

ಭಾಗವತಿಕೆಯಲ್ಲಿ ತಮ್ಮದೇ ಆದ ಶೈಲಿ ಹುಟ್ಟುಹಾಕಿದ್ದ ಪದ್ಯಾಣ ಗಣಪತಿ ಭಟ್ಟ ಅವರು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಪದ್ಯಾಣ ಗಣಪತಿ ಭಟ್ಟ ಅವರ ನಿಧನಕ್ಕೆ ಯಕ್ಷಗಾನ ಪ್ರೇಮಿಗಳು ಕಂಬನಿ ಮಿಡಿದಿದ್ದಾರೆ.

ಶ್ರೀ ಪದ್ಯಾಣ ಗಣಪತಿ ಭಟ್ಟರು 1955 ಜನವರಿ 21ರಂದು ಸುಳ್ಯ ತಾಲೂಕಿನ ಕಲ್ಮಡ್ಕದ ಸಮೀಪ ಗೋಳ್ತಜೆ ಎಂಬಲ್ಲಿ ಪದ್ಯಾಣ ತಿರುಮಲೇಶ್ವರ ಭಟ್, ಸಾವಿತ್ರಿ ಅಮ್ಮ ದಂಪತಿಗಳಿಗೆ ಮಗನಾಗಿ ಜನಿಸಿದರು.

ಮೃತರು ಪತ್ನಿ ಶೀಲಾಶಂಕರಿ, ಮಕ್ಕಳಾದ ಸ್ವಸ್ತಿಕ್ ಪದ್ಯಾಣ ಮತ್ತು ಕಾರ್ತಿಕ್ ಪದ್ಯಾಣ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.