HomePage_Banner
HomePage_Banner
HomePage_Banner
HomePage_Banner

ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಾಲಯದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ  ಆಯುಧ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬಡಗನ್ನೂರುಃ  ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಾಲಯದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ  ಆಯುಧ ಪೂಜೆ ಹಾಗೂ ಭಜನಾ ಕಾರ್ಯಕ್ರಮ.ಅ.13 ರಂದು ನಡೆಯಿತು.

ಬೆಳಗ್ಗೆ ಶ್ರೀ ದೇವರಿಗೆ ಪೂಜೆ ನಡೆದು ಬಳಿಕ ವಾಹನ ಪೂಜೆ ಕಾರ್ಯಕ್ರಮ ನಡೆಯಿತು. ಗಂ 12 30 ರಿಂದ ಶ್ರೀ ದೇವರಿಗೆ ಮಹಾಪೂಜೆ ಪ್ರಸಾದ್ ವಿತರಣೆ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. 
ದೇವಾಲಯದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು.

ಭಜನಾ ಕಾರ್ಯಕ್ರಮ
ಬೆಳಗ್ಗೆ ಗ.9 ರಿಂದ  ವರಮಹಾಲಕ್ಷ್ಮಿಮಹಿಳಾ ಭಜನಾ ಸಂಘ ಪಡುಮಲೆ, ಅಯ್ಯಪ್ಪ ಮಹಿಳಾ ಭಜನಾ ಸಂಘ ಪೆರೀಗೇರಿ, ಮಹಾಲಕ್ಷ್ಮಿ ಮಹಿಳಾ ಭಜನಾ ಸಂಘ ಸುಳ್ಯಪದವು,  ಹಾಗೂ ಕೂವೆ ಶಾಸ್ತಾರ ವಿಷ್ಣುಮೂರ್ತಿ ಸಾಂಸ್ಕೃತಿಕ ಸಂಘ ಪಡುಮಲೆ ಇದರ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು,  ಜೀರ್ಣೋದ್ಧಾರ  ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು  ವ್ಯವಸ್ಥಾಪನಾ ಸಮಿತಿ ಸದಸ್ಯರಾದ  ಚಂದ್ರಶೇಖರ ಆಳ್ವ, ಪ್ರಭಾಕರ ಗೌಡ ಕನ್ನಯ, ಅಪ್ಪಯ್ಯ ನಾಯ್ಕ ತಲೆಂಜಿ,  ಜೀರ್ಣೋದ್ಧಾರ ಸಮಿತಿ ಸದಸ್ಯ ವಿಷ್ಣು ಭಟ್ ಪಡ್ಪು, ಬಡಗನ್ನೂರು  ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಕೆ, ಉಪಾಧ್ಯಕ್ಷ ಸಂತೋಷ್ ಆಳ್ವ ಗಿರಿ ಮನೆ, ಉತ್ಸವ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಬಸವನ ಹಿತ್ಲು , ಹಾಗೂ ಊರ ಭಕ್ತಾಧಿಗಳು ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.