ಆರ್ಯಾಪು ಗ್ರಾ.ಪಂನಲ್ಲಿ ಅಮೃತ ಗ್ರಾಮ ಪಂಚಾಯತ್ ವಿಶೇಷ ಗ್ರಾಮಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು:ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಅಮೃತ ಗ್ರಾಮ ಪಂಚಾಯತಿ ಯೋಜನೆಯಲ್ಲಿ ಆಯ್ಕೆಯಾದ ಆರ್ಯಾಪು ಗ್ರಾ.ಪಂನಲ್ಲಿ ಯೋಜನೆಯ ವಿಶೇಷ ಗ್ರಾಮ ಸಭೆಯು ಅ.13ರಂದು ನಡೆಯಿತು.

ಸಭೆಯು ಅಧ್ಯಕ್ಷ ಸರಸ್ವತಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಯೋಜನೆಯ ಕುರಿತು ಮಾಹಿತಿ ನೀಡಿದ ಪಿಡಿಓ ನಾಗೇಶ್‌ರವರು, ಬೀದಿ-ದೀಪ, ಕುಡಿಯುವ ನೀರಿನ ನಳ್ಳಿ ಸಂಪರ್ಕ, ಶೇ. 100ರಷ್ಟು ಘನತ್ಯಾಜ್ಯ ವಿಂಗಡಣೆ, ವಿಲೇವಾರಿ, ತ್ಯಾಜ್ಯ ನೀರು ವೈಜ್ಞಾನಿಕವಾಗಿ ನಿರ್ವಹಿಸುವುದು, ಗ್ರಾ.ಪಂ. ಕಟ್ಟಡಗಳಿಗೆ ಸೌರ ವಿದ್ಯುತ್ ಅಳವಡಿಕೆ, ಅಮೃತ ಉದ್ಯಾನವನಗಳ ನಿರ್ಮಾಣ, ಗ್ರಾ.ಪಂ. ಗ್ರಂಥಾಲಯಗಳ ಡಿಜಿಟಲೀಕರಣ, ಶಾಲೆಗಳು, ಅಂಗನವಾಡಿಗಳಿಗೆ ಕುಡಿಯುವ ನೀರು, ಶೌಚಾಲಯ, ಶಾಲೆಗಳಲ್ಲಿ ಆಟದ ಮೈದಾನ, ಆವರಣ ಗೋಡೆ ನಿರ್ಮಾಣ, ಕೆರೆ, ಕಲ್ಯಾಣಿಗಳ ಪುನಶ್ಚೇತನ ಕಾರ್ಯಕ್ರಮಗಳು ಅಮೃತ ಗ್ರಾ.ಪಂ. ಯೋಜನೆಯಲ್ಲಿ ಒಳಗೊಂಡಿದೆ ಎಂದರು.

ಉಪಾಧ್ಯಕ್ಷೆ ಪೂರ್ಣಿಮಾ ರೈ, ಸದಸ್ಯರಾದ ಗೀತಾ, ರುಕ್ಮಯ್ಯ ಮೂಲ್ಯ, ಶ್ರೀನಿವಾಸ ರೈ, ರತ್ನಾವತಿ, ಚೇತನ್ ಡಿ, ಕಸ್ತೂರಿ, ಪವಿತ್ರ ಎನ್., ಹರೀಶ್ ನಾಯಕ್, ಗಿರೀಶ್ ಕೆ., ನಳಿನಿ ಕುಮಾರಿ, ರಶೀದಾ, ರಾಏವತಿ, ಅಶೋಕ ನಾಯ್ಕ, ರಕ್ಷಿತಾ, ನಾಗೇಶ್ ಎಂ., ಕಲಾವತಿ ಸಭೆಯಲ್ಲಿ ಉಪಸ್ಥಿತರಿದ್ದರು. ಪಿಡಿಓ ನಾಗೇಶ್ ಸ್ವಾಗತಿಸಿ, ಲೆಕ್ಕಸಹಾಯಕ ಮೋನಪ್ಪ ಕೆ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.