HomePage_Banner
HomePage_Banner
HomePage_Banner
HomePage_Banner

ಕಾವಿನಲ್ಲಿ ಅಕ್ರಮ ಗಾಂಜಾ ಸಾಗಾಟ ಪತ್ತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬಂಧಿತ ಆರೋಪಿಗಳಿಗೆ ಜಾಮೀನು

ಪುತ್ತೂರು:ಅಬಕಾರಿ ಇಲಾಖೆಯ ಅಧಿಕಾರಿಗಳು ನಡೆಸಿದ್ದ ಕಾರ್ಯಾಚರಣೆಯೊಂದರಲ್ಲಿ ಕಾರಿನಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧಿತ ಇಬ್ಬರಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಾಡ್ನೂರು ಗ್ರಾಮದ ಕಾವು ಎಂಬಲ್ಲಿ ಆಗಸ್ಟ್ ೯ರಂದು ರಾತ್ರಿ ಕಾರ್ಯಾಚರಣೆ ನಡೆಸಿದ್ದ ಅಬಕಾರಿ ಅಧಿಕಾರಿಗಳ ತಂಡ ಅಕ್ರಮ ಗಾಂಜಾ ಸಾಗಾಟ ಜಾಲ ಪತ್ತೆ ಮಾಡಿ ಸುಮಾರು 20 ಕೆ.ಜಿಯಷ್ಟು ಗಾಂಜಾವನ್ನು ವಶಪಡಿಸಿಕೊಂಡು ಆರೋಪಿಗಳಾದ ಕೇರಳ ಮೂಲದ ಮೂಸಾ ಅಡುಕಂ ಹಾಗೂ ಮಹಮ್ಮದ್ ಹ್ಯಾರೀಸ್ ಎಂಬಿಬ್ಬರನ್ನು ಬಂಧಿಸಿದ್ದರು.ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಕಾವು ಪೇಟೆಯಿಂದ ಪುತ್ತೂರು ಕಡೆ ಬರುತ್ತಿದ್ದ ಕಾರನ್ನು ತಪಾಸಣೆ ನಡೆಸಿದಾಗ ಕಾರಿನಲ್ಲಿ ತಲಾ 2 ಕೆ.ಜಿಯ 10 ಪ್ಯಾಕೆಟ್‌ನಲ್ಲಿದ್ದ ಒಟ್ಟು 20.6 ಕೆ.ಜಿ. ಗಾಂಜಾ ಪತ್ತೆಯಾಗಿತ್ತು.ಗಾಂಜಾ ಸಮೇತ ಕಾರನ್ನು ವಶಪಡಿಸಿಕೊಂಡಿದ್ದರು.ಇದರ ಮೌಲ್ಯ ರೂ.8ಲಕ್ಷ ಆಗಿದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದರು.ಪುತ್ತೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, ಗಾಂಜಾ ವಶಪಡಿಸಿಕೊಂಡ ರೀತಿಯೇ ಸಂಶಯಾಸ್ಪದವಾಗಿದೆ ಮತ್ತು ವಶಪಡಿಸಿಕೊಂಡಿರುವುದು ಗಾಂಜಾ ಹೌದೋ ಅಲ್ಲವೋ ಎಂಬ ಬಗ್ಗೆಯೂ ಸಂಶಯ ಇರುವುದಾಗಿ ಆರೋಪಿಗಳ ಪರ ವಕೀಲ ಬಿ.ನರಸಿಂಹಪ್ರಸಾದ್ ಅವರ ವಾದವನ್ನು ಪುರಸ್ಕರಿಸಿದ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.