ಉಪ್ಪಿನಂಗಡಿಯಲ್ಲಿ ವಿ.ಹಿಂ.ಪ. ಕಾರ್ಯಕರ್ತ ಜಗದೀಶ್‌ರಿಗೆ ಹಲ್ಲೆ ನಡೆಸಿದ ಆರೋಪ – ಮೂವರು ಪೊಲೀಸರ ವಿರುದ್ಧ ಕೇಸು ದಾಖಲು: ಎಸ್.ಪಿ. ಕಛೇರಿಗೆ ವರ್ಗಾವಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಪರಿಸರದಲ್ಲಿ ನಿಂತಿದ್ದ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತನನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ದೌರ್ಜನ್ಯವೆಸಗಿದ್ದಾರೆ ಎಂದು ಆರೋಪ ವ್ಯಕ್ತವಾದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಸ್ವತಂತ್ರ್ಯ ತಂಡವೊಂದನ್ನು ರಚಿಸಲಾಗಿದ್ದು, ಆರೋಪಿತ ಪೊಲೀಸ್ ಸಿಬ್ಬಂದಿಗಳನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯಿಂದ ದ.ಕ. ಜಿಲ್ಲಾ ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ:
ಗೋಳಿತೊಟ್ಟು ಗ್ರಾಮದ ನಿವಾಸಿ, ವಿಶ್ವಹಿಂದೂ ಪರಿಷದ್ ಕಾರ್ಯಕರ್ತ ಜಗದೀಶ್ ಎ. ಎಂಬವರು ಮಂಗಳೂರಿನ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ತನ್ನನ್ನು ಅಕ್ರಮವಾಗಿ ಕೂಡಿ ಹಾಕಿ ಮೂವರು ಪೊಲೀಸ್ ಸಿಬ್ಬಂದಿಗಳು ತನ್ನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆಂದು ದೂರು ನೀಡಿದ್ದರು. ಈ ಘಟನೆಗೆ ಸಂಬಂಧಿಸಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗ ದಳ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಭೇಟಿ ಮಾಡಿ ತಪ್ಪಿತಸ್ಥ ಪೊಲೀಸರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕೆಂದು ಅಗ್ರಹಿಸಿದ್ದರು. ಮಾತ್ರವಲ್ಲದೆ ಪ್ರಕರಣದಲ್ಲಿ ಅಮಾಯಕ ಯುವಕನಿಗೆ ನ್ಯಾಯ ದೊರಕಿಸಲು ಆಗ್ರಹಿಸಿ ಅ.೧೭ರಂದು ಉಪ್ಪಿನಂಗಡಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದೆಂದು ಎಚ್ಚರಿಸಿದ್ದರು.

ಈ ಪ್ರಕರಣವನ್ನು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಗಂಭೀರವಾಗಿ ಪರಿಗಣಿಸಿದ್ದು, ಯುವಕ ನೀಡಿದ ದೂರಿನ ಆಧಾರದಲ್ಲಿ ಪೊಲೀಸರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಾಗೂ ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಲು ಪ್ರತ್ಯೇಕ ತನಿಖಾ ತಂಡ ರಚಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿತರಾಗಿರುವ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯಿಂದ ದ.ಕ. ಜಿಲ್ಲಾ ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪೊಲೀಸ್ ಸಿಬ್ಬಂದಿಗಳಾದ ಪ್ರತಾಪ್, ಸಂಗಯ್ಯ ಮತ್ತು ಶೇಖರ್‌ರವರು ಕೇಸ್‌ಗೆ ಒಳಗಾಗಿ ವರ್ಗಾವಣೆಗೊಂಡವರು ಎಂದು ಮಾಹಿತಿ ಲಭ್ಯವಾಗಿದೆ.

ಘರ್ಷಣೆಯೇ ಕಾರಣ
ಕ್ಷುಲ್ಲಕ ವಿಚಾರವೊಂದಕ್ಕೆ ಮಾತುಕತೆ ನಡೆದು, ಹಿರೇಬಂಡಾಡಿಯ ಯುವಕನೋರ್ವ ಮತ್ತೊಂದು ತಂಡದಲ್ಲಿ ಗುರುತಿಸಿಕೊಂಡಿರುವ ಅದೇ ಪರಿಸರದ ಯುವಕನಿಗೆ ಆದಿತ್ಯವಾರ ರಾತ್ರಿ ಫೋನ್ ಕರೆ ಮಾಡಿ ದೇವಾಲಯದ ಪರಿಸರಕ್ಕೆ ಬರಲು ಹೇಳಿದ್ದು, ಆತ ತನ್ನ ತಂಡದೊಂದಿಗೆ ಬಂದಾಗ ಇಲ್ಲಿ ಅವನ ತಂಡಕ್ಕೆ ಮತ್ತು ದೇವಾಲಯದ ಪರಿಸರದಲ್ಲಿದ್ದ ಯುವಕನೊಂದಿಗಿದ್ದ ತಂಡಕ್ಕೆ ಪರಸ್ಪರ ಸಂಘರ್ಷಗಳಾಗಿವೆ. ಬಳಿಕ ಅದು ಅಲ್ಲಿಯೇ ತಣ್ಣಗಾಗಿದ್ದು, ಅವರೆಲ್ಲರೂ ಅಲ್ಲಿಂದ ಚದುರಿದ್ದಾರೆ. ಆದರೆ ಆ ಬಳಿಕವೂ ಮತ್ತೊಂದು ತಂಡದವರು ಇನ್ನೊಂದು ತಂಡದವರಿಗಾಗಿ ಹುಡುಕಾಟ ನಡೆಸಿದ್ದು, ಆ ಸಂದರ್ಭ ಒಂದು ತಂಡದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಲ್ಲದೆ, ಲಿಖಿತ ದೂರನ್ನು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ದೇವಾಲಯದ ಪರಿಸರದಲ್ಲಿದ್ದ ಜಗದೀಶ್ ಎಂಬವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದು ಠಾಣೆಯಲ್ಲಿ ಕುಳ್ಳಿರಿಸಿದ್ದರು. ಅಲ್ಲದೇ, ಅವರ ಮೇಲೆ ಮೇಲೆ ಅಮಾನುಷವಾಗಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದು, ಇಷ್ಟೆಲ್ಲಾ ಬೆಳವಣಿಗೆಗಳು ನಡೆದಿವೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.