ಕಡಬ ತಹಶೀಲ್ದಾರ್ ಅನಂತಶಂಕರ್ ನೇತೃತ್ವದಲ್ಲಿ ಶಿರಾಡಿಯಲ್ಲಿ ಗ್ರಾಮ ವಾಸ್ತವ್ಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಕಡಬ ತಾಲೂಕು ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಡಬ ತಾಲೂಕು ತಹಶೀಲ್ದಾರ್ ಅನಂತ್‌ಶಂಕರ್ ನೇತೃತ್ವದಲ್ಲಿ ಕಡಬ ತಾಲೂಕು ಮಟ್ಟದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶಿರಾಡಿ ಗ್ರಾಮದ ಉದನೆ ಸಂತ ಅಂತೋನಿ ಪ್ರೌಢಶಾಲೆಯಲ್ಲಿ ಅ.16ರಂದು ನಡೆಯಿತು.



ಶಿರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿನೀತಾ ತಂಗಚ್ಚನ್‌ರವರು ಉದ್ಘಾಟಿಸಿದರು. ಕಡಬ ತಹಶೀಲ್ದಾರ್ ಅನಂತ್‌ಶಂಕರ್‌ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ.ಪಂ.ಮಾಜಿ ಸದಸ್ಯ ಪಿ.ಪಿ.ವರ್ಗೀಸ್, ಶಿರಾಡಿ ಗ್ರಾ.ಪಂ. ಉಪಾಧ್ಯಕ್ಷ ಕಾರ್ತಿಕೇಯನ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ರಾಜಾರಾಮ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಮಧುಸೂದನ್, ಮೆಸ್ಕಾಂ ಕಡಬ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್, ಪಶುವೈದ್ಯಾಧಿಕಾರಿ ಡಾ.ಮಲ್ಲಿಕಾ, ಭೂ ದಾಖಲೆಗಳ ಇಲಾಖೆಯ ರಮಾದೇವಿ ವೇದಿಕೆಯಲ್ಲಿದ್ದರು. ಕಡಬ ಕಂದಾಯ ನಿರೀಕ್ಷಕ ಅವಿನ್ ಸ್ವಾಗತಿಸಿ, ಕಡಬ ತಾ.ಪಂ.ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ವಂದಿಸಿದರು. ಗ್ರಾಮ ಸಹಾಯಕ ಉದಯಕುಮಾರ್ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಸಲವತ್ತು ಕೋರಿ ಗ್ರಾಮಸ್ಥರು ಅರ್ಜಿ ಸಲ್ಲಿಸಿದರು. ಹಕ್ಕುಪತ್ರ ಸಿಕ್ಕರೂ ಪಹಣಿ ಪತ್ರ ಸಿಕ್ಕಿಲ್ಲ, ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಮಾಡುವಂತೆ, ಶಿರಾಡಿಯಲ್ಲಿ ಪೊಲೀಸ್ ಹೊರಠಾಣೆ ಆರಂಭ, ಸರಕಾರಿ ಬಸ್ ಓಡಾಟ ಸೇರಿದಂತೆ ವಿವಿಧ ವಿಚಾರಗಳನ್ನು ಗ್ರಾಮಸ್ಥರು ಸಭೆಯಲ್ಲಿ ಪ್ರಸ್ತಾಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.