ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಕಡಬದ ಸಾನ್ವಿಕ ಕೆ.ಎಸ್.ರವರಿಗೆ ಕಂಚಿನ ಪದಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮೈಸೂರು ದಸರಾ ಅಂಗವಾಗಿ ಯುವ ದಸರಾ ಕ್ರೀಡಾಕೂಟವನ್ನು ಕರ್ನಾಟಕ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೇತೃತ್ವದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಡಬ ತಾಲೂಕಿನ ಕರಾಟೆ ಪಟು ಸಾನ್ವಿಕ ಕೆ.ಎಸ್ ಅವರು ದ.ಕ ಜಿಲ್ಲೆಯನ್ನು ಪ್ರತಿನಿಧಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ೧೭ ವಯಸ್ಸಿನವರ ೪೦ ಕೆ.ಜಿ ವಿಭಾಗದ ಕುಮಿಟೆ(ಫೈಟ್) ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಸಾನ್ವಿಕಾ ಅವರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಕರಾಟೆ ಜೊತೆಗೆ ವೈಟ್ ಲಿಫ್ಟಿಂಗ್ ತರಬೇತಿಯನ್ನು ಪಡೆಯುತ್ತಿದ್ದಾರೆ. ಇವರ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ಪಿಸಿಎಂಬಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಡ್ಯಾನ್ಸ್, ಸಂಗೀತ ಮೊದಲಾದ ಕ್ಷೇತ್ರದಲ್ಲೂ ಸಾಧನೆ ಮಾಡಿರುವ ಸಾನ್ವಿಕಾ ಅವರು ಕೆಲವು ತಿಂಗಳ ಹಿಂದೆ ಕರಾಟೆಯಲ್ಲಿ ವಿಶ್ವ ದಾಖಲೆ ಮಾಡಿದ್ದರು. ಇವರು ಆರಿಗ ಕಂಗುಳೆ ಸದಾನಂದ ಗೌಡ ಮತ್ತು ವಾಣಿ ದಂಪತಿಗಳ ಪುತ್ರಿ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.