ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಮಟ್ಟದ ತ್ರೋಬಾಲ್ ತರಬೇತಿ ಶಿಬಿರದ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು :  ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು ಮತ್ತು ತ್ರೋಬಾಲ್ ಅಸೋಸಿಯೇಶನ್ ಆಫ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯ ತ್ರೋಬಾಲ್ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.

ಸಭಾ ಅಧ್ಯಕ್ಷತೆಯನ್ನು ವಹಿಸಿಕೊಂಡ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಇಡಿ. ಅಶ್ವಿನ್ ಎಲ್. ಶೆಟ್ಟಿ ಇವರು ತಮ್ಮ ಅಧ್ಯಕ್ಷೀಯ ಮಾತಿನಲ್ಲಿ ಕ್ರೀಡಾಪಟುಗಳಲ್ಲಿ ಶಿಸ್ತುನೊಂದಿಗೆ ಕಠಿಣ ಪರಿಶ್ರಮ ಅಗತ್ಯ ಎಂಬುದಾಗಿ ಹೇಳಿದರು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ನ್ಯಾಯವಾದಿಗಳು ಹಾಗೂ ಕರ್ನಾಟಕ ವಾಲಿಬಾಲ್ ಅಸೋಸಿಯೇಶನ್‌ನ ಉಪಾಧ್ಯಕ್ಷರಾದ ಶ್ರೀ ಜಯಪ್ರಕಾಶ ರೈ ಇವರು ತಮ್ಮ ಉದ್ಘಾಟನಾ ಮಾತಿನಲ್ಲಿ ಕ್ರೀಡಾಪಟುಗಳು ತಮ್ಮ ಬಹುಮುಖ ಪ್ರತಿಭೆಯನ್ನು ಪ್ರದರ್ಶಿಸಬೇಕಾದರೆ ಅದಕ್ಕಾಗಿ ಬಹಳಷ್ಟು ಶ್ರಮವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ವಿಟ್ಲದ ಕನ್ಸಲ್ಟೆಂಟ್ ಇಂಜಿನಿಯರ್ ಆಗಿರುವ  ಸುರೇಶ್ ಬನಾರಿಯವರು ಇಂತಹ ಒಂದು ರಾಜ್ಯಮಟ್ಟದ ತರಬೇತಿ ಶಿಬಿರವನ್ನು ಹಳ್ಳಿಪ್ರದೇಶದ ಸಂಸ್ಥೆಯಲ್ಲಿ ನಡೆಸುವಂತಹದ್ದು ಸುಲಭದ ಮಾತಲ್ಲ. ಹಾಗಾಗಿ ಈ ಒಂದು ಶಿಬಿರವನ್ನು ನಡೆಸುತ್ತಿರುವ ವಿದ್ಯಾಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ರಾಜ್ಯ ತ್ರೋಬಾಲ್ ತರಬೇತುದಾರರಾದ  ರಾಜೇಶ್ ಟಿ.ಬಿ. ಶುಭಹಾರೈಕೆಯ ಮಾತುಗಳನ್ನಾಡಿದರು. ವೇದಿಕೆಯಲ್ಲಿ ನಿವೃತ್ತ ಸೇನಾಧಿಕಾರಿ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆ ಪುತ್ತೂರು ಇಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ  ಮಾಧವ ಬಿ.ಕೆ., ರಾಜ್ಯಮಟ್ಟದ ಯುವಜನ ಮೇಳದ ಸಂಘಟಕರಾದ ಶ್ರೀ ಸುದರ್ಶನ್ ಪಡಿಯಾರ್, ಕೆ.ಪಿ.ಯಸ್.ಸಿ. ಸ್ಕೂಲ್ ಕುಂಬ್ರದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ  ಜಯರಾಮ ಗೌಡ, ಶ್ರೀಕೃಷ್ಣ ವಿದ್ಯಾಸಂಸ್ಥೆ ಪಟ್ಟೆಯ ದೈಹಿಕ ಶಿಕ್ಷಣ ಶಿಕ್ಷಕರಾದ  ಮೋನಪ್ಪ ಪಟ್ಟೆ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ   ಸೀತಾರಾಮ ಕೇವಳ ಹಾಗೂ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿಯಾದ ಕು.ಪೂರ್ಣಿಮಾ ಪಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರನ್ನೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಶ್ರೀ ಸೀತಾರಾಮ ರೈ ಸ್ವಾಗತಿಸಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ  ರಾಜಲಕ್ಷ್ಮೀ ಎಸ್. ರೈ ವಂದಿಸಿದರು.

ಉದ್ಘಾಟಕರ ಕಿರುಪರಿಚಯವನ್ನು ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ  ಶಿವಪ್ರಸಾದ್ ಕೆ ಆರ್ ಹಾಗೂ ಮುಖ್ಯ ಅತಿಥಿಗಳ ಕಿರುಪರಿಚಯವನ್ನು ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಹರ್ಷಿತ್‌ಕುಮಾರ್ ಶೆಟ್ಟಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ಕು. ಪೂರ್ಣಿಮಾ ಪಿ ಹಾಗೂ ರಾಷ್ಟ್ರೀಯ ಸೇವಾಯೋಜನಾ ಘಟಕದಲ್ಲಿ ಸಾಧನೆಗೈದ ಕು. ಮಂದಿರಾ ಎಂ ಇವರನ್ನು ಗುರುತಿಸಲಾಯಿತು. ಈ ಗುರುತಿಸುವಿಕೆಯ ಕಾರ್ಯವನ್ನು ಇಂದ್ರಪ್ರಸ್ಥ ವಿದ್ಯಾಸಂಸ್ಥೆ ಉಪ್ಪಿನಂಗಡಿಯ ದೈಹಿಕ ಶಿಕ್ಷಣ ಶಿಕ್ಷಕರಾದ  ವಿಜೇತ್‌ರವರು ನೆರವೇರಿಸಿದರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸಶಾಸ್ತ್ರ ಉಪನ್ಯಾಸಕಿಯಾದ  ಪ್ರತಿಭಾ ಎಸ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು. ತೃತೀಯ ಬಿ.ಎ. ವಿದ್ಯಾರ್ಥಿ  ಸಂಪ್ರೀತ್ ಬಿ.ಎಸ್. ಪ್ರಾರ್ಥನೆಗೈದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.