ಅ.20: ಕೌಡಿಚ್ಚಾರ್ ಶ್ರೀಕೃಷ್ಣ ಭಜನಾ ಮಂದಿರದ ಭೂಮಿಪೂಜೆ-ಶಿಲಾನ್ಯಾಸ-ನಿಧಿಸಮರ್ಪಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವರದಿ: ಸುನೀಲ್ ಎನ್. ಕಾವು

ಕಾವು: ನವೀಕರಣಗೊಂಡು ಪುನರ್‌ನಿರ್ಮಾಣಗೊಳ್ಳಲಿರುವ ಅರಿಯಡ್ಕ ಗ್ರಾಮದ ಶ್ರೀಕೃಷ್ಣ ಭಜನಾ ಮಂದಿರದ ಭೂಮಿ ಪೂಜೆ, ಶಿಲಾನ್ಯಾಸ ಮತ್ತು ನಿಧಿ ಸಮರ್ಪಣೆಯು ಅ.20ರಂದು ನಡೆಯಲಿದೆ.

ಬೆಳಿಗ್ಗೆ ಗಂಟೆ 7.30ರಿಂದ 8.23ರ ತುಲಾ ಲಗ್ನದ ಸುಮುಹೂರ್ತದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳವರಿಂದ ಧಾರ್ಮಿಕ ವಿಧಿ ವಿಧಾನ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸು ಪೂಜಾರಿ ಗುಂಡ್ಯಡ್ಕರವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರುರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಶ್ರೀಕ್ಷೇತ್ರ ಹನುಮಗಿರಿಯ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ, ಕ್ಷೇತ್ರ ಪುರೋಹಿತ ಶಿವಪ್ರಸಾದ್ ಕಡಮಣ್ಣಾಯ, ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಶಶಿಧರ ರಾವ್ ಬೊಳಿಕ್ಕಲ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ, ಕೆದಂಬಾಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಕರುಣಾಕರ ರೈ ಅತ್ರೆಜಾಲು, ಕುಂಬ್ರ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಬಾಬು ಪೂಜಾರಿ ಬಡೆಕ್ಕೋಡಿ, ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ ಕನ್ನಯ, ಯುವ ಉದ್ಯಮಿ ಸಹಜ್ ರೈ ಬಳಜ್ಜ, ಜ್ಯೋತಿಷಿ ಸುಬ್ರಾಯ ಬಲ್ಯಾಯ, ಕೌಡಿಚ್ಚಾರ್ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಗೌರವಾಧ್ಯಕ್ಷ ಮರದಮುತ್ತುರವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ ಎಂದು ಭಜನಾ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ರಾಮದಾಸ ರೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.