ಚೇತನಾ ಆಸ್ಪತ್ರೆಯಲ್ಲಿ ಕೋವಿಡ್ ಆಂಟಿಜೆನ್ ಟೆಸ್ಟ್ ಸೌಲಭ್ಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಳೆದ ಹಲವಾರು ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಚೇತನಾ ಆಸ್ಪತ್ರೆಯಲ್ಲಿ ಐಸಿಎಂಆರ್ ಅನುಮೋದಿತ ಕೋವಿಡ್ ಆಂಟಿಜೆನ್ ಟೆಸ್ಟ್ ಸೌಲಭ್ಯ ಆರಂಭಗೊಂಡಿದೆ. ಈ ಕೋವಿಡ್ ಆಂಟಿಜೆನ್ ಟೆಸ್ಟ್ ಸೌಲಭ್ಯವು ದಿನದ ೨೪ ಗಂಟೆಯ ಕಾಲವೂ ಆಸ್ಪತ್ರೆಯಲ್ಲಿ ಲಭ್ಯವಿದ್ದು, ಪರೀಕ್ಷೆ ಮಾಡಿದ ಅರ್ಧ ಗಂಟೆಯೊಳಗೆ ರಿಪೋರ್ಟ್ ಲಭಿಸುತ್ತದೆ.

ಜೊತೆಗೆ ಹೊರರಾಜ್ಯ, ವಿದೇಶಗಳಿಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಅವಶ್ಯಕವಾಗಿರುವ ಆರ್‌ಟಿ-ಪಿಸಿಆರ್ ಟೆಸ್ಟ್ ಕೂಡ ಥೈರೋಕೇರ್ ಸಂಸ್ಥೆಯ ಸಹಯೋಗದೊಂದಿಗೆ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ. ಇದರ ಫಲಿತಾಂಶವು ಎರಡು ದಿನಗಳಲ್ಲಿ ಲಭಿಸುತ್ತದೆ.
ಟೆಸ್ಟ್‌ಗಳ ಜೊತೆಗೆ ಈಗಾಗಲೇ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ಮೊದಲ ಅಥವಾ ಎರಡನೇ ಡೋಸ್ ಪಡೆಯಬೇಕಿರುವವರು ಮೊದಲೇ ಬುಕ್ ಮಾಡಿದಲ್ಲಿ ಲಸಿಕೆ ನೀಡಲಾಗುತ್ತದೆ. ಕೋವಿಶೀಲ್ಡ್‌ಗೆ ರೂ.೭೫೦/- ಮತ್ತು ಕೋವ್ಯಾಕ್ಸಿನ್‌ಗೆ ೧,೨೦೦/- ದರವನ್ನು ನಿಗದಿಪಡಿಸಲಾಗಿದೆ ಎಂದು ಚೇತನಾ ಆಸ್ಪತ್ರೆಯ ನಿರ್ದೇಶಕ ಡಾ| ಜೆ.ಸಿ. ಅಡಿಗ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.