ಬಡಗನ್ನೂರಿನಲ್ಲಿ ದಲಿತ ಸಮುದಾಯದ ಬಾಲಕಿಯ ಅತ್ಯಾಚಾರ ಪ್ರಕರಣ: ಸಂಪ್ಯ ಠಾಣಾ ಮುಂಭಾಗದಲ್ಲಿ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಡಗನ್ನೂರಿನ ಮನೆಯೊಂದರ ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ, ಆಕೆ ಮಗುವಿಗೆ ಜನ್ಮ ನೀಡಲು ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಮತ್ತು ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಅ.21ರಂದು‌ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯ ಪ್ರಾರಂಭದಲ್ಲಿ ದರ್ಬೆ ವೃತ್ತದ ಬಳಿಯಿಂದ ಕಾಲ್ನಡಿಗೆಯ ಮೂಲಕ ಮೆರವಣಿಗೆ ಮೂಲಕ ಸಂಪ್ಯ ಠಾಣಾ ಬಳಿಗೆ ಸಾಗಿ ಬಂದ ಪ್ರತಿಭಟನಾಕಾರರು ಅತ್ಯಾಚಾರಕ್ಕೆ ಕಾರಣವಾದ ಆರೋಪಿಯ ವಿರುದ್ಧ ಧಿಕ್ಕಾರ ಕೂಗಿದರಲ್ಲದೆ ಅವರನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿದರು. ಪ್ರಕರಣವನ್ನು ತಿರುಚಿ ಪೊಲೀಸರು ಆರೋಪಿಯ ಪರ ನಿಂತಿದ್ದಾರೆ ಎಂದೂ ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.