ಬೆಳ್ಳಿಪ್ಪಾಡಿ ಕೊಡಿಮರ ಅಂಗನವಾಡಿ ಕೇಂದ್ರದಲ್ಲಿ ನಿವೃತ್ತ ಸೈನಿಕ ಚಂದ್ರಶೇಖರ ಗೌಡರವರಿಗೆ ಸನ್ಮಾನ-ತೂಕದ ಯಂತ್ರ ಕೊಡುಗೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಅಂಗನವಾಡಿ ಕೇಂದ್ರದಲ್ಲಿ ನಿವೃತ್ತ ಯೋಧ ಗುಂಡೋಲೆ ಚಂದ್ರಶೇಖರ ಗೌಡರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಕ್ಕೆ ತೂಕದ ಯಂತ್ರವನ್ನು ಚಂದ್ರಶೇಖರರವರು ಕೊಡುಗೆಯಾಗಿ ನೀಡಿದರು. ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷ ಕೆ. ರಾಮಚಂದ್ರ ಪೂಜಾರಿ ಶಾಂತಿನಗರ, ಉಪಾಧ್ಯಕ್ಷೆ ಉಷಾ ಲಕ್ಷ್ಮಣ ಪೂಜಾರಿ ಕೋರ್‍ಯ, ಸದಸ್ಯರಾದ ರಾಮಣ್ಣ ಗೌಡ ಗುಂಡೋಲೆ, ಪುಷ್ಪಾ ಲೋಕಯ್ಯ ನಾಯ್ಕ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯಗುರು ಶಿವಶಂಕರ ಭಟ್ ಉಂಡೆಮನೆ, ಬಾಲವಿಕಾಸ ಸಮಿತಿಯ ಮಾಜಿ ಅಧ್ಯಕ್ಷ ಪುರಂದರ ಗೌಡ ನೇಲಡ್ಕ, ಶ್ರೀನಿವಾಸ ಶೆಟ್ಟಿ ಕಠಾರ ಮತ್ತು ಗ್ರಾ.ಪಂ. ಮಾಜಿ ಅಧ್ಯಕ್ಷೆ ಸಂಧ್ಯಾ ರಾಮಚಂದ್ರ ಗೌಡ ಕೈಲಾಜೆರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪವಿತ್ರಾ ದಯಾನಂದ ಬಾರ್ತಿಯೋಲ್ ಸ್ವಾಗತಿಸಿದರು. ಅಂಗನವಾಡಿ ಕೇಂದ್ರದ ಕಾರ್‍ಯಕರ್ತೆ ರೇವತಿ ಎ. ವಂದಿಸಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ ಬೀರಿಗ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅರುಣಾ ಡಿ. ಕಾರ್ಯಕ್ರಮ ನಿರೂಪಿಸಿದರು. ಸಹಾಯಕಿ ದಿವ್ಯ ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.