ಸರ್ವೆ: ಪರನೀರುವಿನಲ್ಲಿ ಲೋ ವೋಲ್ಟೇಜ್ ಸಮಸ್ಯೆಗೆ ಕೊನೆಗೂ ಮುಕ್ತಿ-ನೂತನ ಟ್ರಾನ್ಸ್‌ಫಾರ್ಮರ್ ಲೋಕಾರ್ಪಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

`ಸುದ್ದಿ’ಯ ಜನಾಧಿಕಾರದ ಅನಾವರಣ ಕಾರ್ಯಕ್ರಮದಲ್ಲಿ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದ ಗ್ರಾ.ಪಂ ಸದಸ್ಯ


ಪುತ್ತೂರು: ಸರ್ವೆ ಗ್ರಾಮದ ಪರನೀರು ಎಂಬಲ್ಲಿ ವೋಲ್ಟೇಜ್ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದ್ದು ನೂತನ ಟ್ರಾನ್ಸ್‌ಫಾರ್ಮರ್ ಅಳವಡಿಕೆಯಾಗಿ ಲೋಕಾರ್ಪಣೆಗೊಂಡಿದೆ. ಶಾಸಕ ಸಂಜೀವ ಮಠಂದೂರು ಅವರು ನೂತನ ಟ್ರಾನ್ಸ್‌ಫಾರ್ಮರ್‌ನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಸರಕಾರ ಮುನ್ನೆಚ್ಚರಿಕೆ ವಹಿಸಿಕೊಂಡು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜನರಿಗೆ 24ಗಂಟೆಯೂ ವಿದ್ಯುತ್ ನೀಡಬೇಕೆನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

 

ಪ್ರಸ್ತಾವನೆಗೈದ ಮುಂಡೂರು ಗ್ರಾ.ಪಂ ಸದಸ್ಯ ಕರುಣಾಕರ ಗೌಡ ಎಲಿಯ ಮಾತನಾಡಿ ಇತ್ತೀಚೆಗೆ ಸುದ್ದಿ ಚಾನೆಲ್ ಮುಖಾಂತರ ನಡೆದ ಜನಾಧಿಕಾರದ ಅನಾವರಣ ಕಾರ್ಯಕ್ರಮದಲ್ಲಿ ಮೆಸ್ಕಾಂ ಇಲಾಖೆಯವರ ಸಂದರ್ಶನ ಸಮಯದಲ್ಲಿ ಎಇಇ ಆಗಿರುವ ರಾಮಚಂದ್ರ ಅವರಲ್ಲಿ ನಾನು ಫೋನ್ ಮೂಲಕ ವಿಷಯ ತಿಳಿಸಿದೆ. ಅನೇಕ ವರ್ಷಗಳ ಇಲ್ಲಿನ ಸಮಸ್ಯೆ ಬಗ್ಗೆ ಹೇಳಿಕೊಂಡು ಶೀಘ್ರದಲ್ಲೇ ಬೇಡಿಕೆ ಈಡೇರಿಸುವಂತೆ ವಿನಂತಿಸಿದಾಗ ಅವರು ಸಕಾರಾತ್ಮಕವಾಗಿ ಸ್ಪಂಧಿಸಿದರು. ಶಾಸಕರು, ಗ್ರಾ.ಪಂ ಸದಸ್ಯರು ಇವರೆಲ್ಲರ ಪರಿಶ್ರಮದ ಫಲವಾಗಿ ಟ್ರಾನ್ಸ್‌ಫಾರ್ಮರ್ ಆಗಿದೆ. ವಿಚಾರದ ಬಗ್ಗೆ ಗಮನ ಸೆಳೆಯಲು ಕಾರಣವಾದ ಸುದ್ದಿ ಬಿಡುಗಡೆಗೂ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ಕರುಣಾಕರ ಗೌಡ ಎಲಿಯ ಹೇಳಿದರು.
ವೇದಿಕೆಯಲ್ಲಿ ಮುಂಡೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ಎನ್, ಸದಸ್ಯರಾದ ಪ್ರವೀಣ್ ನಾಯ್ಕ ನೆಕ್ಕಿತ್ತಡ್ಕ, ಚಂದ್ರಶೇಖರ ಎನ್.ಎಸ್.ಡಿ, ಸರ್ವೆ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಅಶೋಕ್ ರೈ ಸೊರಕೆ, ಸವಣೂರು ಮೆಸ್ಕಾಂನ ರಮೇಶ್ ಕರುಂಬಾರು, ವಿಶ್ವನಾಥ ಗೌಡ, ಕೃಷ್ಣಪ್ಪ ನಾಯ್ಕ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಮುಂಡೂರು ಗ್ರಾ.ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೊಟ್ಯಾಡಿ ಸ್ವಾಗತಿಸಿದರು. ಬಿಜೆಪಿ ಮುಖಂಡ ಸುಂದರ ಬಲ್ಯಾಯ ನೆಕ್ಕಿಲು ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.