ಅ.24: ಕಾವು ತುಡರ್ ಭಜನಾ ಸಂಘದ 6ನೇ ವಾರ್ಷಿಕೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾವು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದ ಅಧೀನದಲ್ಲಿರುವ ತುಡರ್ ಭಜನಾ ಸಂಘದ 6ನೇ ವಾರ್ಷಿಕೋತ್ಸವ ಸಮಾರಂಭವು ಭಜನಾ ಗುರು ಮಧ್ವಾಧೀಶ ವಿಠಲದಾಸ ರಾಮಕೃಷ್ಣ ಕಾಟುಕುಕ್ಕೆಯವರ ಶುಭಾಶೀರ್ವಾದಗಳೊಂದಿಗೆ ಅ.24ರಂದು ಸಂಜೆ ನನ್ಯ ಜನಮಂಗಲ ಸಭಾಭವನದಲ್ಲಿ ನಡೆಯಲಿದೆ. ಸಂಜೆ ಗಂಟೆ 5ರಿಂದ ದೀಪ ಪ್ರಜ್ವಲನೆಯೊಂದಿಗೆ ಭಜನಾ ಕಾರ್ಯಕ್ರಮ ಆರಂಭಗೊಂಡು ವಿವಿಧ ಭಜನಾ ತಂಡಗಳ ಕೂಡುವಿಕೆಯೊಂದಿಗೆ ಭಜನಾ ಸಂಕೀರ್ತನೆ ನಡೆದು ಸಂಜೆ ಗಂಟೆ 7.30ಕ್ಕೆ ಭಜನಾ ಮಂಗಳೋತ್ಸವ ನಡೆಯಲಿದೆ.

ಧಾರ್ಮಿಕ ಸಭೆ:
ಸಂಜೆ ಗಂಟೆ 8 ರಿಂದ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಸೇವಾಪ್ರಮುಖ್ ನ. ಸೀತಾರಾಮರವರು ಮುಖ್ಯ ಭಾಷಣ ಮಾಡಲಿದ್ದಾರೆ. ತುಡರ್ ಭಜನಾ ಸಂಘದ ಅಧ್ಯಕ್ಷ ಸಂಕಪ್ಪ ಪೂಜಾರಿ ಚಾಕೋಟೆ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಕ್ಷೇತ್ರ ಹನುಮಗಿರಿಯ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯರವರು ಸನ್ಮಾನ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೌಡಿಚ್ಚಾರ್ ಶ್ರೀಕೃಷ್ಣ ಭಜನಾ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ರಾಮದಾಸ ರೈ ಮದ್ಲ, ಅರಿಯಡ್ಕ ಗ್ರಾ.ಪಂ ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿಯವರು ಭಾಗವಹಿಸಲಿದ್ದಾರೆ. ತುಡರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯ ಮದ್ಲ, ಅಧ್ಯಕ್ಷ ಸುನೀಲ್ ನಿಧಿಮುಂಡ ಉಪಸ್ಥಿತಿ ವಹಿಸಲಿದ್ದಾರೆ. ಹಿರಿಯ ಭಜನಾಪಟುಗಳಾದ ಅಮ್ಮು ಪೂಂಜ ಪಳನೀರು ಮತ್ತು ಸದಾಶಿವ ಮಣಿಯಾಣಿ ಕುತ್ಯಾಡಿಯವರಿಗೆ ಸನ್ಮಾನ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಭೋಜನ ನಡೆಯಲಿದೆ ಎಂದು ಯುವಕ ಮಂಡಲದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.