ಕಾರ್ಯಕರ್ತನ ಮೇಲೆ ಹಲ್ಲೆ: ಎಸ್‌ಕೆಎಸ್‌ಎಸ್‌ಎಫ್ ದ.ಕ.ಜಿಲ್ಲಾ ಸಮಿತಿ ಖಂಡನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಳ್ಳಾರೆಯಲ್ಲಿ ಎಸ್ಕೆಎಸ್‌ಎಸ್‌ಎಫ್‌ನ ಕಾರ್ಯಕರ್ತ ಅಝರುದ್ದೀನ್ ಎಂಬವರ ಮೇಲೆ ನಡೆದ ಹಲ್ಲೆಯನ್ನು ಎಸ್ಕೆಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ಖಂಡಿಸಿದೆ. ರಾಜ್ಯದಲ್ಲಿ ಸಮುದಾಯವು ವಿವಿಧ ಸವಾಲುಗಳನ್ನು ಎದುರಿಸುತ್ತಿದ್ದು, ಅದನ್ನು ಎದುರಿಸಲು ಸಮುದಾಯ ಒಂದಾಗಿ ನಿಲ್ಲುವ ಅನಿವಾರ್ಯತೆಯಿದ್ದು ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ, ಪ್ರಚೋದನೆ, ಪ್ರವಾದಿ ನಿಂದನೆ ಇವೆಲ್ಲಾ ಸವಾಲುಗಳನ್ನು ಎದುರಿಸಬೇಕಾದ ಸಮಯದಲ್ಲಿ ಅಧಿಕಾರದ ಆಸೆಗಾಗಿ ಮಸೀದಿಯ ಒಳಗಡೆ ನಮ್ಮ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವುದು ಖೇದಕರವಾಗಿದೆ. ಅಝರುದ್ಧೀನ್ ಅವರು ವಿಖಾಯದ ಕಾರ್ಯಕರ್ತನಾಗಿದ್ದು ಹಲವಾರು ಸೇವಾ ಕಾರ್ಯಗಳಲ್ಲಿ ಭಾಗವಹಿಸಿದವರಾಗಿದ್ದಾರೆ. ಮಸೀದಿ ಆಡಳಿತ ಸಮಿತಿಯ ಚುನಾವಣೆ ಅದರ ಯಥಾ ರೀತಿಯಲ್ಲಿ ನಡೆಯಬೇಕೇ ಹೊರತು, ಪಕ್ಷ, ಪಂಗಡ ಗುರುತಿಸಿಕೊಂಡು ಹಲ್ಲೆ ನಡೆಸುವ ಮಟ್ಟಕ್ಕೆ ಯಾರೂ ಇಳಿಯಬಾರದು ಎಂದು ಎಸ್ಕೆಎಸ್ಸೆಸ್ಸೆಫ್ ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಯಮಾನಿ ತಿಂಗಳಾಡಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.