ಬಡಗನ್ನೂರು ಅತ್ಯಾಚಾರ ಸಂತ್ರಸ್ತೆಯ ಮನೆಗೆ ಜಿಲ್ಲಾ ಯುವ ಕಾಂಗ್ರೆಸ್ ನಿಯೋಗ ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಹೋರಾಟ-ಲುಕ್ಮಾನ್ ಬಂಟ್ವಾಳ

 

ಪುತ್ತೂರು: ಬಡಗನ್ನೂರು ಗ್ರಾಮದ ಅತ್ಯಾಚಾರ ಸಂತ್ರಸ್ತೆಯ ಮನೆಗೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ ಅವರ ನೇತೃತ್ವದ ಯೂತ್ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಕುಟುಂಬದೊಂದಿಗೆ ಮಾತುಕತೆ ನಡೆಸಿ ಕುಟುಂಬದ ಮುಂದಿನ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಬಡ ಕುಟುಂಬಕ್ಕೆ ಆಗಿರುವ ಆಗಿರುವ ಅನ್ಯಾಯವನ್ನು ಯಾರೂ ಸಹಿಸಲು ಸಾಧ್ಯವಿಲ್ಲ, ಬಾಲಕಿಯ ಮುಗ್ದತೆಯನ್ನು ದುರುಪಯೋಗಪಡಿಸಿಕೊಂಡು ಅತ್ಯಾಚಾರ ನಡೆಸಿ ಮಗುವಿನ ಜನನಕ್ಕೆ ಕಾರಣವಾಗಿರುವ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಲುಕ್ಮಾನ್ ಆಗ್ರಹಿಸಿದರು. ನಾವು ರಾಜಕೀಯ ಲಾಭಕ್ಕಾಗಿ ಇಲ್ಲಿಗೆ ಬಂದಿಲ್ಲ, ದಲಿತ ಕುಟುಂಬದ ಸಂತ್ರಸ್ತೆಯ ಕುಟುಂಬದ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಲು ನಾವು ಆಗಮಿಸಿದ್ದೇವೆ, ಸಂತ್ರಸ್ತೆಯು ಆರೋಪಿ ಬಗ್ಗೆ ಮಾಹಿತಿಯನ್ನು ಮೊದಲೇ ಮಾಹಿತಿ ನೀಡಿದ್ದರೂ ಆರೋಪಿಯನ್ನು ಬಂಧಿಸುವ ಕಾರ್ಯ ಮಾಡಿಲ್ಲ, ಕುಟುಂಬಕ್ಕೆ ಒತ್ತಡವನ್ನೂ ಹಾಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದ ಲುಕ್ಮಾನ್ ಅವರು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವ ವರೆಗೆ ನಾವು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ಸಂತ್ರಸ್ತೆಯ ತಾಯಿ ಜೊತೆ ಮಾತುಕತೆ ನಡೆಸಿದ ಲುಕ್ಮಾನ್ ಬಂಟ್ವಾಳ ಅವರು ನಿಮ್ಮ ಜೊತೆ ನಾವಿದ್ದೇವೆ, ಎದೆಗುಂದಬೇಡಿ, ನಿಮಗೆ ನ್ಯಾಯ ಸಿಗಲೇಬೇಕು, ಅದಕ್ಕಾಗಿ ನಾವು ನಮ್ಮಿಂದಾಗುವ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಹೇಳಿದರು.

ತಪ್ಪನ್ನು ಮುಚ್ಚಿಡುವವರ ವಿರುದ್ಧವೂ ಹೋರಾಟ:
ಅತ್ಯಾಚಾರ ಮಾಡಿರುವ ಆರೋಪಿ ಒಂದೆಡೆಯಾದರೆ, ಆರೋಪಿಯನ್ನು ವ್ಯವಸ್ಥಿತವಾಗಿ ರಕ್ಷಿಸುತ್ತಿರುವವರ ಬಗ್ಗೆಯೂ ನಾವು ಹೋರಾಟ ನಡೆಸುತ್ತೇವೆ, ಜಿಲ್ಲಾ ಯುವ ಕಾಂಗ್ರೆಸ್ ಮುಖಾಂತರ ಮುಂದಿನ ದಿನಗಳಲ್ಲಿ ಪತ್ರಿಕಾಗೋಷ್ಠಿ ನಡೆಸಿ ಇನ್ನಷ್ಟು ವಿಚಾರಗಳ ಬಗ್ಗೆ ಹೇಳಲಿದ್ದೇವೆ. ಜಿಲ್ಲಾಡಳಿತದೊಂದಿಗೂ ಮಾತನಾಡಲಿದ್ದೇವೆ ಎಂದು ಲುಕ್ಮಾನ್ ಬಂಟ್ವಾಳ ಹೇಳಿದರು.

ರಾಜಕೀಯ ರಹಿತವಾಗಿ ಮೊದಲೇ ಧ್ವನಿ ಎತ್ತಿದ್ದೇವೆ-ಕೇಶವ ಪಡೀಲ್
ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಮಾತನಾಡಿ ಬಡಗನ್ನೂರು ಅತ್ಯಾಚಾರ ಸಂತ್ರಸ್ತೆಯ ವಿಚಾರದಲ್ಲಿ ಕಾಂಗ್ರೆಸ್ ಎಸ್.ಸಿ ಘಟಕ ರಾಜಕೀಯ ರಹಿತವಾಗಿ ಮೊದಲೇ ಧ್ವನಿ ಎತ್ತಿದೆ ಎಂದರು. ಪ್ರತಿಭಟನಾ ಹೋರಾಟದಲ್ಲೂ ನಾವು ಮುಂಚೂಣಿಯಲ್ಲಿ ಭಾಗಿಯಾಗಿದ್ದೇವೆ. ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಮನವಿ ನೀಡಿ ಪ್ರಕರಣದಲ್ಲಿ ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಒದಗಿಸಲು ನಿರಂತರ ಪ್ರಯತ್ನಿಸುತ್ತಿದೆ, ಪ್ರಕರಣದ ಆರೋಪಿಯನ್ನು ಬಂಧಿಸಿ ಸಂತ್ರಸ್ತ ಬಾಲಕಿಗೆ ನ್ಯಾಯ ಸಿಗೋವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕೇಶವ ಪಡೀಲ್ ಹೇಳಿದರು.

ಹೋರಾಟ ಮುಂದುವರಿಯಲಿದೆ-ಮುಖಂಡರ ಎಚ್ಚರಿಕೆ
ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಉಪಾಧ್ಯಕ್ಷ ರಾಮ ಪಾಂಬಾರು ಹಾಗೂ ಬ್ಲಾಕ್ ಕಾಂಗ್ರೆಸ್ ಸುಳ್ಯ ಎಸ್.ಸಿ ಘಟಕದ ಅಧ್ಯಕ್ಷ ಆನಂದ ಬೆಳ್ಳಾರೆ ಮಾದ್ಯಮದ ಜೊತೆ ಮಾತನಾಡಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕುವವರೆಗೆ ಹೋರಾಟ ಮುಂದುವರಿಸುವುದಾಗಿ ಹೇಳಿದರು.
ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಅಭಿಷೇಕ್ ಬೆಳ್ಳಿಪ್ಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಬಂಗೇರ, ನವಾಲ್ ಉಪ್ಪಿನಂಗಡಿ, ಎಸ್.ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ, ಪುತ್ತೂರು ಬ್ಲಾಕ್ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣ ಕೊಳ್ತಿಗೆ, ಪ್ರ.ಕಾರ್ಯದರ್ಶಿಗಳಾದ ರಶೀದ್ ಮುರ, ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.