ಕೆಎಸ್ಸಾರ್ಟಿಸಿ ನೌಕರರ ಮುಷ್ಕರ ಮೂರನೇ ದಿನಕ್ಕೆ – ನ್ಯಾಯ ಕೊಡಿಸುವುದಾಗಿ ಶಾಸಕರಿಂದ ಭರವಸೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವೇತನ ಮತ್ತು ನಿವೃತ್ತಿ ನೌಕರರ ಸೇರಿದಂತೆ ಇತರ ಸೌಲಭ್ಯಗಳ ಬೇಡಿಕೆ ಮುಂದಿಟ್ಟು ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಸದಸ್ಯರು ನಡೆಸುತ್ತಿರುವ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಅ.23ರಂದು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ.

3ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹವನ್ನು ಕೆಸ್ಸಾರ್ಟಿಸಿ ಮಜ್ದೂರ್ ಸಂಘದ ಉಪಾಧ್ಯಕ್ಷ ಸಂಜೀವ ಗೌಡ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿ ಮಜ್ದೂರು ಸಂಘದ ಪ್ರಧಾನ ವಕ್ತಾರ ಶಾಂತಾರಾಮ ವಿಟ್ಲ, ವೆಂಕಟ್ರಮಣ ಭಟ್, ಸತ್ಯಶಂಕರ ಭಟ್, ಬಿ.ಆರ್. ಆನಂದ, ರಾಮಚಂದ್ರ ಅಡಪ, ಕರುಣಾಕರ ಗೌಡ ಕೊಳಕ್ಕೆ, ಲೋಕಯ್ಯ, ಗಂಗಾಧರ, ಪೂವಪ್ಪ ಗೌಡ, ಶೀನ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಸಚಿವರ ಗಮನಕ್ಕೆ
ದ.ಕ.ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆಯು ಜಿಲ್ಲೆಯ ೭ ಮಂದಿ ಶಾಸಕರ ಉಪಸ್ಥಿತಿಯಲ್ಲಿ ನಡೆಯಲಿದ್ದು ಕೆಸ್ಸಾರ್ಟಿಸಿ ನೌಕರರ ಸಮಸ್ಯೆಯ ಕುರಿತು ಚರ್ಚಿಸಿ ಸರ್ಕಾರದ ಗಮನದ ವಿಷಯ ತರುವುದಾಗಿ ಶಾಸಕ ಮಠಂದೂರು ಭರವಸೆ ನೀಡಿದರು. ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮುಷ್ಕರ ನಿರತರನ್ನು ಭೇಟಿ ಮಾಡಿ ನ್ಯಾಯಯುತ ಮುಷ್ಕರಕ್ಕೆ ಸಂಪೂರ್ಣ ಬೆಂಬಲವನ್ನು ಘೋಷಿಸಿ ಈ ವಿಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವರ, ಬಿಜೆಪಿ ರಾಜ್ಯಾಧ್ಯಕ್ಷರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.