ಗ್ರಾಮ ಪಂಚಾಯತಿಗಳ ಮೂಲಕ ಜನರಿಗೆ ಹೆಚ್ಚಿನ ಸೇವೆ ನೀಡಲು ಸರ್ಕಾರ ನಿರ್ಧಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಗ್ರಾ.ಪಂ.ನೌಕರರ ವೇತನ ಸಮಸ್ಯೆ ಬಗೆಹರಿಸಲು ಸಮಿತಿ ರಚನೆ

ಬೆಂಗಳೂರು: ಪ್ರಸ್ತುತ ಇರುವ ಸೇವೆಗಳ ಜೊತೆಗೆ ಇನ್ನಷ್ಟು ನಾಗರಿಕ ಸ್ನೇಹಿ ಸೇವೆಗಳನ್ನು ಗ್ರಾಮ ಪಂಚಾಯತ್‌ಗಳ ಮೂಲಕ ಗ್ರಾಮೀಣ ಪ್ರದೇಶಗಳಿಗೆ ಕೊಂಡೊಯ್ಯಲು ರಾಜ್ಯ ಸರ್ಕಾರ ಉತ್ಸುಕವಾಗಿದ್ದು ಸಿಬಂದಿಗಳಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿ ಸೇರಿದಂತೆ ಆಡಳಿತವನ್ನು ಚುರುಕುಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ಧರಿಸಿದೆ.

ಕರ್ನಾಟಕದಲ್ಲಿ 6ಸಾವಿರಕ್ಕೂ ಅಧಿಕ ಗ್ರಾಮ ಪಂಚಾಯತ್‌ಗಳಿವೆ. ಅವುಗಳ ಸಶಕ್ತೀಕರಣಕ್ಕೆ ಸರ್ಕಾರ ಹಲವು ನಾಗರಿಕ ಸೇವೆಗಳನ್ನು ಗ್ರಾಮ ಪಂಚಾಯತ್‌ಗಳಿಗೆ ನೀಡಿದೆ.ಅವುಗಳಲ್ಲಿ ಜನನ, ಮರಣ ಪ್ರಮಾಣಪತ್ರ, ಆದಾಯ ಮತ್ತು ಜಾತಿ ಸರ್ಟಿಫಿಕೇಟ್, ಖಾತೆ, ಆಕ್ಯುಪೆನ್ಸಿ ಸರ್ಟಿಫಿಕೇಟ್‌ಗಳೂ ಸೇರಿವೆ.ಪ್ರಸ್ತುತ ಈ ಸೇವೆಗಳನ್ನು ಪಡೆಯಲು ನಾಗರಿಕರು ತಾಲ್ಲೂಕು ಕೇಂದ್ರಗಳಿಗೆ ಹೋಗಬೇಕಿದೆ.

ನೌಕರರಿಗೆ ಹೆಚ್ಚಿನ ಕೆಲಸ: ನಾಗರಿಕ ಸೇವೆಗಳನ್ನು ಹೆಚ್ಚೆಚ್ಚು ನೀಡುತ್ತಾ ಹೋದಾಗ ಪಂಚಾಯತ್ ನೌಕರರ ಕೆಲಸಗಳೂ ಹೆಚ್ಚಾಗುತ್ತವೆ.ಆದರೆ ತಮಗೆ ವೇತನ ಸರಿಯಾದ ಸಮಯಕ್ಕೆ ಬರುತ್ತಿಲ್ಲ ಎನ್ನುವುದು ಪಂಚಾಯತ್ ನೌಕರರ ದೂರು.ತಿಂಗಳುಗಟ್ಟಲೆ ನಮಗೆ ವೇತನ ಬರುತ್ತಿಲ್ಲ. ಹಲವು ಬಾರಿ ಈ ಬಗ್ಗೆ ಪ್ರತಿಭಟನೆ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನುವ ಆರೋಪಗಳೂ ಕೇಳಿ ಬರುತ್ತಿದ್ದವು.ಹೆಚ್ಚು ಕೆಲಸ ನೀಡಿ ಸರಿಯಾದ ಸಮಯಕ್ಕೆ ಸಂಬಳ ನೀಡದಿರುವುದು ತಪ್ಪು. ಪ್ರತಿಭಟನೆ ನಡೆಸಲು ಮುಂದಾದರೆ ಇಡೀ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಮೂಲಗಳು ಹೇಳುತ್ತವೆ.ಈ ನಿಟ್ಟಿನಲ್ಲಿ, ಪಂಚಾಯತ್ ನೌಕರರಿಗೆ ಸರಿಯಾದ ಸಮಯಕ್ಕೆ ವೇತನವನ್ನು ನೀಡಲು ಆರ್‌ಡಿಪಿಆರ್ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ನೇಮಿಸಲಾಗಿದೆ.ಪ್ರತಿ ತಿಂಗಳ ೫ರೊಳಗೆ ನೌಕರರಿಗೆ ವೇತನ ನೀಡಬೇಕೆಂದು ಕೋರಲಾಗಿದೆ.ಬಾಕಿ ಉಳಿಕೆ ವೇತನವನ್ನು ನೀಡುವಂತೆ ಸೂಚಿಸಲಾಗಿದೆ.ಮಾತ್ರವಲ್ಲದೆ ಪಂಚಾಯತ್ ನೌಕರರ ಅಂತಿಮ ವಿಧಿವಿಧಾನಗಳಿಗೆ ಹಣವನ್ನು ಮಂಜೂರು ಮಾಡಬಹುದೇ ಎಂದು ಅಧ್ಯಯನ ಮಾಡಲೂ ಸಮಿತಿಯನ್ನು ಕೇಳಿಕೊಳ್ಳಲಾಗಿದೆ.

ಈ ಹಿಂದೆ ಗ್ರಾಮ ಪಂಚಾಯತ್ ನೌಕರರಿಗೆ ಸರಿಯಾದ ಸಮಯಕ್ಕೆ ವೇತನ ಸಿಗುತ್ತಿಲ್ಲ ಎಂಬ ವ್ಯಾಪಕ ದೂರುಗಳು ವ್ಯಕ್ತವಾಗಿದ್ದ ಬಗ್ಗೆ ವರದಿಯಾಗಿತ್ತು.ಬಿಲ್ ಕಲೆಕ್ಟರ್, ವಾಟರ್‌ಮ್ಯಾನ್, ಡೇಟಾ ಆಪರೇಟರ್ ಮತ್ತು ಅಟೆಂಡರ್‌ನಂತಹ ವಿವಿಧ ಹುದ್ದೆಗಳಲ್ಲಿ 50,000ಕ್ಕೂ ಹೆಚ್ಚು ಜನರು ಗ್ರಾಮ ಪಂಚಾಯತ್‌ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕೋವಿಡ್ -19 ಲಾಕ್‌ಡೌನ್ ಸಮಯದಲ್ಲಿ ಕೆಲಸ ಮಾಡುತ್ತಿದ್ದರು, ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುತ್ತಿದ್ದರು. ಸಾಂಕ್ರಾಮಿಕ ರೋಗದ ಬಗ್ಗೆ ಹಳ್ಳಿಗಳಲ್ಲಿ ಜಾಗೃತಿ ಮೂಡಿಸುತ್ತಿದ್ದರು.ಜನರಿಗೆ ಆರೋಗ್ಯ ಕಿಟ್ ಒದಗಿಸುತ್ತಿದ್ದರು.ಇದೀಗ ಗ್ರಾಮ ಪಂಚಾಯತ್ ನೌಕರರಿಗೆ ಸರಿಯಾದ ಸಮಯದಲ್ಲಿ ವೇತನ ಪಾವತಿ ನಿಟ್ಟಿನಲ್ಲಿ ಕ್ರಮಕೈಗೊಳ್ಳುವ ಉzಶದಿಂದ ಸಮಿತಿಯನ್ನು ನೇಮಿಸಲಾಗಿದ್ದು ಸಮಿತಿಯ ವರದಿ ಬಂದ ಬಳಿಕ ಸರಕಾರ ಈ ಕುರಿತು ಕ್ರಮಕೈಗೊಳ್ಳುವ ನಿರೀಕ್ಷೆ ಹೊಂದಲಾಗಿದೆ.

3ತಿಂಗಳೊಳಗೆ ವರದಿ ಸಲ್ಲಿಸಲು ಕೋರಿಕೆ `ಗ್ರಾಮ ಪಂಚಾಯತ್ ಹೊಸ
ಸದಸ್ಯರು ಕೆಲ ತಿಂಗಳ ಹಿಂದಷ್ಟೇ ಚುನಾಯಿತರಾಗಿದ್ದಾರೆ.ಅವರಿಗೆ ಅಭಿವೃದ್ಧಿ ಕೆಲಸಗಳನ್ನು ಜಾರಿಗೆ ತರುವ ಉತ್ಸುಕತೆಯಿದೆ. ಹಂಚಿಕೆಯಾದ ನಿಧಿಯನ್ನು ಕೂಡ ಬಳಸುತ್ತಾರೆ. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳನ್ನು ಜಾರಿಗೆ ತರುವಲ್ಲಿ ಇಲಾಖೆ ನೌಕರರು ಮುಖ್ಯ ಪಾತ್ರ ವಹಿಸುತ್ತಾರೆ. ಹೊಸದಾಗಿ ಚುನಾಯಿತರಾದ ಸದಸ್ಯರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು.ಆಡಳಿತವನ್ನು ಸುಗಮಗೊಳಿಸಲು ಸಮಿತಿ ಹಲವು ಸಮಸ್ಯೆಗಳನ್ನು, ವಿಚಾರಗಳನ್ನು ನೋಡಲಿದೆ. ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಕೋರುತ್ತೇವೆ.

ಕೆ.ಎಸ್.ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಖಾತೆ ಸಚಿವರು

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.