ಜಿಡೆಕಲ್ಲು ಸ.ಪ್ರ.ದ. ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭ, ಪ್ರತಿಭಾ ಪುರಸ್ಕಾರ, ಸನ್ಮಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭ ಮತ್ತು ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ಸ.ಪ್ರ.ದ. ಮಹಿಳಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹಾಗೂ ಕೃಷಿ ಸಾಹಿತಿ ಡಾ. ನರೇಂದ್ರ ರೈ ದೇರ್ಲರವರ ‘ನೆಲಮುಖಿ’ ಪುಸ್ತಕಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಮತ್ತು ‘ಬೇರು ಬದುಕು’ ಪುಸ್ತಕಕ್ಕೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಿಂದ ಅತ್ಯುತ್ತಮ ಕೃಷಿ ಪುಸ್ತಕ ಪ್ರಶಸ್ತಿ ದೊರಕಿದ್ದು ಪ್ರಾಧ್ಯಾಪಕ ಡಾ.ನರೇಂದ್ರ ರೈ ದೇರ್ಲರವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನರೇಂದ್ರ ರೈಯವರು, ಕಾಲೇಜಿನ ಕುಟುಂಬ ಸದಸ್ಯರು ಮತ್ತು ವಿದ್ಯಾರ್ಥಿಗಳು ನೀಡಿದ ಸನ್ಮಾನ ವನ್ನು ಸಹೃದಯದಿಂದ ಸ್ವೀಕರಿಸಿದ್ದೇನೆ. ನಿಮ್ಮೆಲ್ಲರ ಪ್ರೀತಿಗೆ ನಾನು ಚಿರಋಣಿ ಎಂದು ತಿಳಿಸಿದರು. ವಿಶ್ವವಿದ್ಯಾನಿಲಯದ ಶಿಕ್ಷಣ ಪಡೆದ ನೀವು ಇಂದಿನಿಂದ ಲೋಕ ವಿಶ್ವವಿದ್ಯಾಲಯದ ಜೀವನ ಶಿಕ್ಷಣಕ್ಕೆ ತೆಗೆದುಕೊಳ್ಳುತ್ತಿದ್ದೀರಿ. ಇದರಲ್ಲಿ ಉತ್ತೀರ್ಣರಾದರೆ ನೀವು ಜೀವನದಲ್ಲಿ ಯಶಸ್ಸು ಕಂಡಂತೆ ಎಂದು ತಿಳಿಸಿ ಶುಭಹಾರೈಸಿದರು.

ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳಾದ ಪ್ರಜ್ಞಾ, ಯೋಗೀಶ್, ಮತ್ತು ಅನುಷಾ ತಮ್ಮ ಕೃತಜ್ಞಾಪೂರ್ವಕ ಮಾತುಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲೆ ನಳಿನಾಕ್ಷಿ ಎ.ಎಸ್. ಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಭಾವಚಿತ್ರ ಮುದ್ರಿತ ಸ್ಮರಣಿಕೆ ನೀಡಿ ಶುಭಹಾರೈಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕನಾಥ್ ದಾಸ್ ಮಾಣಿ ಉಪಸ್ಥಿತರಿದ್ದರು. ಕಾಲೇಜಿನ ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕ ಪ್ರೊ. ಪದ್ಮನಾಭ ಸನ್ಮಾನಿತರನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸೇಸಪ್ಪ ವಂದಿಸಿದರು. ಕಾಲೇಜಿನ ಗ್ರಂಥಪಾಲಕ ರಾಮಚಂದ್ರ ಕಾರ್ಯಕ್ರಮ ಸಂಯೋಜಿಸಿದರು. ಆರಂಭದಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜಿನ ಮೂರು ವರ್ಷಗಳ ಶೈಕ್ಷಣಿಕ ಚಟುವಟಿಕೆಗಳನ್ನು ಪಿಪಿಟಿ ಮೂಲಕ ಪರಿಚಯಿಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.