ಆರ್ಯಾಪು ಬಿಲ್ಲವ ಗ್ರಾಮ ಸಮಿತಿಯಿಂದ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಗುರುಪೂಜೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಆರ್ಯಾಪು ಇದರ ಆಶ್ರಯದಲ್ಲಿ ಅ.24  ರಂದು ಆರ್ಯಾಪು ಸಂಪ್ಯ ಅಕ್ಷಯ ಕಾಲೇಜ್‌ನಲ್ಲಿ ಗುರುಪೂಜಾ ಕಾರ್‍ಯಕ್ರಮ ನಡೆಯಿತು.

 

 

ಬೆಳಿಗ್ಗೆ ಕಾರ್ತಿಕ್ ಮತ್ತು ತಂಡದವರಿಂದ ಭಜನಾ ಕಾರ್‍ಯಕ್ರಮ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರೂ ಆಗಿರುವ ಅಕ್ಷಯ ಕಾಲೇಜು ಛೇರ್‌ಮೆನ್ ಜಯಂತ ನಡುಬೈಲುರವರು ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಕಾರ್ಯಕ್ರಮ ಉದ್ಘಾಟಿಸಿದರು. ಪತ್ರಕರ್ತ ಸಂತೋಷ್ ಕುಮಾರ್ ಶಾಂತಿನಗರರವರು ಗುರು ಸಂದೇಶ ನೀಡಿದರು. ರಾಮಜಾಲು ಶ್ರೀ ಬ್ರಹ್ಮ ಬೈದೆರ್ಕಳ ಗರಡಿಯ ಆಡಳಿತ ಮೊಕ್ತೇಸರ ಸಂಜೀವ ಪೂಜಾರಿ ಕೂರೇಲು, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ, ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಕರ್ಣಾಟಕ ಬ್ಯಾಂಕ್ ಸಹಾಯಕ ಪ್ರಬಂಧಕ ಹರೀಶ್ ಪೂಜಾರಿ ಉದ್ಯಂಗಲ ಮತ್ತು ಪತ್ತೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಚಂದ್ರಕಲಾ ಮುಕ್ವೆರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಸಕ ಸಂಜೀವ ಮಠಂದೂರು. ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಹೇಮ ನಾಥ ಶೆಟ್ಟಿ, ರಾಮಕ್ರಷ್ಣ ಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು  ಸಭಾ ಕಾರ್ಯಕ್ರಮ ಬಳಿಕ ಭೇಟಿ ನೀಡಿದರು.
ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಆರ್ಯಾಪು ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷ ಅಶೋಕ್ ಸಂಪ್ಯ, ಕಾರ್ಯದರ್ಶಿ ವಿಶ್ವಜಿತ್ ಅಮ್ಮುಂಜ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.