ಬೆಟ್ಟಂಪಾಡಿ ಪದವಿಪೂರ್ವ ಕಾಲೇಜಿನಲ್ಲಿ ‘ಕಾನೂನು ಅರಿವು’ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಟ್ಟಂಪಾಡಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ‘ಕಾನೂನು ಅರಿವು’ ಕಾರ್ಯಕ್ರಮವು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅರಿವು ಮತ್ತು ನೆರವು ಘಟಕದ ಮೂಲಕ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಲಕ್ಷ್ಮಿಕಾಂತ ರೈ ಅನಿಕೂಟೇಲ್ ‘ಭಾರತದ ಸಂವಿಧಾನ ಮತ್ತು ಅದರ ಪ್ರಮುಖ ಅನುಚ್ಚೇದ’ ಎಂಬ ವಿಷಯದ ಕುರಿತು ಮಾತನಾಡಿ, ನಮ್ಮ ದೇಶದ ಸಂವಿಧಾನಕ್ಕೆ ತನ್ನದೇ ಆದಂತಹ ಭವ್ಯ ಇತಿಹಾಸ, ವಿಶೇಷ ಮಹತ್ವ ಹಾಗೂ ಲಿಖಿತ ಸ್ವರೂಪವಿದೆ. ಜಗತ್ತಿನಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ ನಮ್ಮದು. ಹಲವು ಮಹಾನ್ ಕಾನೂನು ತಜ್ಞರನ್ನೊಳಗೊಂಡ ಸಂವಿಧಾನ ರಚನಾ ಸಭೆಯಿಂದ ರಚನೆಯಾಗಿರುವ ಭಾರತದ ಸಂವಿಧಾನದಲ್ಲಿ, ಎಲ್ಲ ವರ್ಗಗಳ, ಎಲ್ಲ ಸ್ತರದ ಜನರ ಹಿತವಿದೆ.

ಜೊತೆಗೆ ನಮ್ಮ ದೇಶದ ಪ್ರಜಾಪ್ರಭುತ್ವದ ಭದ್ರ ಬುನಾದಿಯೂ ನಮ್ಮ ಸಂವಿಧಾನ ಎಂದರಲ್ಲದೇ, ಸಂವಿಧಾನದ ಪ್ರಮುಖ ಅನುಚ್ಚೇದಗಳ ಬಗ್ಗೆ ವಿವರಣೆ ನೀಡಿದರು. ಇನ್ನೊರ್ವ ಸಂಪನ್ಮೂಲ ವ್ಯಕ್ತಿಯಾಗಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಸಹಾಯಕ ಪ್ರಾಧ್ಯಾಪಕ ಕೌಶಿಕ್ ಸಿ ” ವಿದ್ಯಾರ್ಥಿಗಳಿಗೆ ಸಾಮಾನ್ಯ ಕಾನೂನು” ಎಂಬ ವಿಷಯದ ಬಗ್ಗೆ ಮಾತನಾಡಿ, ಹುಟ್ಟಿನಿಂದ ತೊಡಗಿ ವ್ಯಕ್ತಿಯ ಅಂತ್ಯದ ನಂತರವೂ ಹಿಂಬಾಲಿಸುವುದು ಕಾನೂನು. ಕಾನೂನನ್ನು ಅಧ್ಯಯನ ಮಾಡುವುದರಿಂದ ಜೀವನದ ಯಾವುದೇ ಸವಾಲನ್ನು ಸುಲಭವಾಗಿ ಎದುರಿಸಬಹುದು. ಕಾನೂನಿನ ಬಗ್ಗೆ ನಿರ್ಧಿಷ್ಟ ಮಾಹಿತಿ ಮತ್ತು ಅರಿವು ಎಲ್ಲರಿಗೂ ಅಗತ್ಯ ಎಂದರು. ಜೊತೆಗೆ ವಿದ್ಯಾರ್ಥಿಗಳಿಗೆ ಇರುವ ಸಾಮಾನ್ಯ ಕಾನೂನಿನ ಮಾಹಿತಿಯನ್ನು ವಿವಿಧ ನಿದರ್ಶನಗಳ ಮೂಲಕ ವಿವರಿಸಿದ ಅವರು, ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಎದುರಿಸುವ ವಿವಿಧ ಸವಾಲುಗಳ ಬಗ್ಗೆ ವಿವರಿಸಿದರು. ಬೆಟ್ಟಂಪಾಡಿ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಡಿ ಪ್ರಾಸ್ತವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಅರಿವು ಪಡೆದುಕೊಂಡಾಗ ಆ ಮೂಲಕ ಉತ್ತಮ ಜೀವನವನ್ನು ರೂಪಿಸಲು ಸಾಧ್ಯವಾಗುತ್ತದೆ. ಮಾಹಿತಿಯಿದ್ದಾಗ ಸಮಸ್ಯೆಗಳು ಬಂದಾಗ ಅದನ್ನು ಕಾನೂನಿನ ಮೂಲಕ ಉತ್ತಮ ರೀತಿಯಲ್ಲಿ ಪರಿಹಾರ ಪಡೆದುಕೊಳ್ಳಬಹುದು ಎಂದರು. ಉಪನ್ಯಾಸದ ಬಳಿಕ ಸಂವಾದ ಕಾರ್ಯಕ್ರಮ ನಡೆಯಿತು. ಉಪನ್ಯಾಸಕರಾದ ಪದ್ಮನಾಭ ಎನ್, ಸಯ್ಯದ್ ಫಾರುಕ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.