ಮುಂಬಯಿ ’ಕರ್ನಾಟಕ ಮಲ್ಲ’ ಕನ್ನಡ ದಿನಪತ್ರಿಕೆಯ ಸಂಪಾದಕ ಬಜತ್ತೂರಿನ ಚಂದ್ರಶೇಖರ್‌ಗೆ ರಾಜ್ಯೋತ್ಸವ ಪ್ರಶಸ್ತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಹಿರಿಯ ಪತ್ರಕರ್ತ, ಮುಂಬಯಿ ’ಕರ್ನಾಟಕ ಮಲ್ಲ’ ಕನ್ನಡ ದಿನಪತ್ರಿಕೆಯ ಸಂಪಾದಕ ಬಜತ್ತೂರು ಪಾಲೆತ್ತಾಡಿಯ ಚಂದ್ರಶೇಖರ ಪಾಲೆತ್ತಾಡಿಯವರು ೨೦೨೦-೨೧ನೇ ಸಾಲಿನ ಹೊರ ನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ಕಳೆದ ೨೫ ವರ್ಷಗಳಿಂದ ಮುಂಬಯಿಯಲ್ಲಿ ಕರ್ನಾಟಕ ಮಲ್ಲದ ಸಂಪಾದಕರಾಗಿ ಮಾಡುತ್ತಿದ್ದ ಕನ್ನಡ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರ ಅವರನ್ನು ಗೌರವಿಸಿದೆ.

 


ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಮಣಿಕ್ಕಳ ಬೈಲಿನ ಪಾಲೆತ್ತಾಡಿ ಮನೆಯ ತುಂಬು ಕುಟುಂಬದಲ್ಲಿ ಜನಿಸಿದ ಚಂದ್ರಶೇಖರ ಪಾಲೆತ್ತಡಿಯವರು ಬಜತ್ತೂರು ವಳಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಉಪ್ಪಿನಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಹಾಗೂ ಉಪ್ಪಿನಂಗಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಡಿಗ್ರಿ ಪಡೆದಿದ್ದರು. ಆನಂತರ ಮಂಗಳೂರು ಕೊಣಾಜೆಯಲ್ಲಿನ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪೊಲಿಟಿಕಲ್ ಸಯನ್ಸ್ ಎಂ.ಎ ಪದವಿ ಪಡೆದಿದ್ದಾರೆ. ಮಂಗಳೂರಿನ ಹೊಸದಿಗಂತ ಕನ್ನಡ ದಿನಪತ್ರಿಕೆಯ ಮೂಲಕ ಪತ್ರಿಕೋದ್ಯಮ ವೃತ್ತಿಗೆ ಕಾಲಿಟ್ಟ ಅವರು ನಂತರ ಮಂಗಳೂರು ಮಿತ್ರ ಸಂಜೆ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ಅನಂತರ ಮುಂಬಯಿಯಲ್ಲಿ ಮಂಗಳೂರು ಮಿತ್ರದ ಸಂಪಾದಕ ಎಂ. ಮಲ್ಲಿಕಾರ್ಜುನಯ್ಯ ಅವರು ಆರಂಭಿಸಿದ ‘ಕರ್ನಾಟಕ ಮಲ್ಲ’ ದಲ್ಲಿ ತಮ್ಮ ವೃತ್ತಿಯನ್ನು ಮುಂದುವರಿಸಿದರು. ಆ ನಂತರ ಅದರ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮುಂಬಯಿಯಲ್ಲಿ ಕನ್ನಡ ಭಾಷೆ ಸಂಸ್ಕೃತಿಯ ಉನ್ನತಿಗೆ ಕರ್ನಾಟಕ ಮಲ್ಲದ ಕೊಡುಗೆ ಅಪಾರವಾಗಿದೆ. ಇದೇ ರೀತಿಯಲ್ಲಿ ಕನ್ನಡ-ತುಳು ಸಂಘಟನೆಗಳಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿರುವ ಚಂದ್ರಶೇಖರ ಪಾಲೆತ್ತಾಡಿ ಅವರಿಗೆ ೨೦೧೭ರಲ್ಲಿ ಮುಂಬಯಿ ಕನ್ನಡ ಹಾಗೂ ತುಳು ಸಂಘಟನೆಗಳ ಒಗ್ಗೂಡುವಿಕೆಯಲ್ಲಿ ‘ಆಪ್ತಮಿತ್ರ’ ಅಭಿನಂದನಾ ಗ್ರಂಥದ ಮೂಲಕ ಗೌರವಿಸಲಾಗಿತ್ತು. ಇದಲ್ಲದೆ ಉಡುಪಿ, ದಕ್ಷಿಣಕನ್ನಡ ಹಾಗೂ ಮುಂಬಯಿಯ ವಿವಿಧ ಸಂಘಸಂಸ್ಥೆಗಳು ಅವರನ್ನು ಸನ್ಮಾನಿಸಿ ಗೌರವಿಸಿದ್ದರು. ನೇರ ಮಾತು ಮತ್ತು ಸರಳ ಜೀವನ ಶೈಲಿಯ ಚಂದ್ರಶೇಖರ ಪಾಲೆತ್ತಾಡಿ ಅವರ ಮುಂಬಯಿಯಲ್ಲಿನ ಕನ್ನಡ ಸೇವೆ ಹಾಗೂ ಪತ್ರಿಕೋದ್ಯಮದ ಸೇವೆಗೆ ರಾಜ್ಯಸರ್ಕಾರ ಮನ್ನಣೆ ನೀಡುವ ಮೂಲಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.