ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕನ್ನಡರಾಜ್ಯೋತ್ಸವ ಆಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 66ನೇ ಕನ್ನಡರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಲಕ್ಮೀನಾರಾಯಣ ರಾವ್ ರವರು ಧ್ವಜಾರೋಹಣ ನೆರವೇರಿಸಿ, ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈದು, ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿ, ವಿದ್ಯಾರ್ಥಿಗಳು ಕನ್ನಡದ ಕವನ, ಕತೆ ಬರೆಯುವ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ಹೇಳಿ ಕನ್ನಡದ ಕವಿಗಳನ್ನು ಸ್ಮರಿಸಿದರು.

ಪ್ರಾಂಶುಪಾಲರಾದ  ಚಂದ್ರಶೇಖರ್ ರವರು ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈದು, ಕನ್ನಡರಾಜ್ಯೋತ್ಸವದ ಹಿನ್ನೆಲೆ ಮತ್ತು ಮಹತ್ವವನ್ನು ವಿವರಿಸಿದರು. ಶಾಲಾ ಮುಖ್ಯ ಶಿಕ್ಷಕರಾದ  ಸತೀಶ್ ಭಟ್, ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು, ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಕನ್ನಡದ ಬಗೆಗಿನ ಹಾಡು, ಕವನ ವಾಚನ, ಚಿತ್ರಕಲೆ ಪ್ರದರ್ಶನ ಕಾರ್ಯಕ್ರಮ ನಡೆಯಿತು.

 

 

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.