ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕನ್ನಡದ ಘೋಷಣೆಗಳೊಂದಿಗೆ ಹಾಗೂ ಚೆಂಡೆ ವಾದನದೊಂದಿಗೆ ಅತಿಥಿ ಗಣ್ಯರನ್ನು ಬರಮಾಡಿಕೊಂಡು ಕನ್ನಡದ ಬಾವುಟಗಳೊಂದಿಗೆ ಮತ್ತು ಭುವನೇಶ್ವರಿ ದೇವಿಯ ವೇಷದೊಂದಿಗೆ ಮೆರವಣಿಗೆಯಲ್ಲಿ ಬಂದು ಕನ್ನಡದ ಧ್ವಜಾರೋಹಣ ನಡೆಸಲಾಯಿತು. ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಸಂಚಾಲಕ ಅಬ್ರಹಾಂ ವರ್ಗೀಸ್‌ರವರು ಧ್ವಜಾರೋಹಣ ಮಾಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ನಾಡಗೀತೆ, ರಾಷ್ಟ್ರಗೀತೆ ಹಾಗೂ ಶಾಲಾ ಪ್ರಾರ್ಥನೆಯನ್ನು ವಿದ್ಯಾರ್ಥಿಗಳು ಹಾಡಿದರು.


ಕಾಲೇಜಿನ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮಕ್ಕೆ ಮೊದಲು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವಿಶ್ವನಾಥ ಶೆಟ್ಟಿಯವರು ಕರುನಾಡ ತಾಯಿ ಸದಾ ಚಿನ್ಮಯಿ ಹಾಡನ್ನು ಹಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು ವೃಂದಗಾನ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯ ನೆಲ್ಯಾಡಿ ಘಟಕ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ನೂರಂದಪ್ಪರವರು ಮಾತನಾಡಿ, ಕರ್ನಾಟಕದ ಏಕೀಕರಣ ಮತ್ತು ಕನ್ನಡ ಭಾಷೆ ಬೆಳೆದು ಬಂದ ರೀತಿಯನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್‌ರವರು ಮಾತನಾಡಿ, ನಮ್ಮ ಮಾತೃಭಾಷೆ ಬೇರೆ ಬೇರೆಯಾಗಿದ್ದರೂ ಕೂಡ ನಮಗೆ ಅನ್ನ ನೀಡುವ ಭಾಷೆ ಕನ್ನಡ ಎಂದು ನುಡಿದರು.

ವಿದ್ಯಾರ್ಥಿಗಳಿಂದ ಭಾಷಣ ಮತ್ತು ಸಮೂಹ ಗೀತೆ ನಡೆಯಿತು. ಕಾಲೇಜಿನ ಕನ್ನಡ ಉಪನ್ಯಾಸಕ ಚೇತನ್ ಕುಮಾರ್ ಟಿ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾಲೇಜಿನ ಪ್ರಾಚಾರ್ಯ ಏಲಿಯಾಸ್ ಎಂ.ಕೆ ಸ್ವಾಗತಿಸಿದರು. ಪ್ರೌಢಶಾಲೆಯ ಮುಖ್ಯಗುರು ತೋಮಸ್ ಎಂ.ಐ, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಹರಿಪ್ರಸಾದ್ ಕೆ., ಉಪಸ್ಥಿತರಿದ್ದರು. ಸಂಸತ್ತಿನ ಕಾರ್ಯದರ್ಶಿ ಶರೂನ್ ರೋಯ್ ವಂದಿಸಿದರು. ಎನ್‌ಎಸ್‌ಎಸ್ ನಾಯಕಿ ಭವಿಷ್ಯ. ಜೆ.ಕೆ ಮತ್ತು ಗ್ರೀಷ್ಮಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾಸಂಸ್ಥೆಯ ಅಧ್ಯಾಪಕವೃಂದ, ಬೋಧಕೇತರ ಸಿಬ್ಬಂದಿ ಹಾಗೂ ಪೂರ್ವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬಹುಮಾನ ವಿತರಣೆ:
ಕನ್ನಡ ರಾಜ್ಯೋತ್ಸವದ ಆಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಸುಂದರ ಕೈಬರಹ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ನಗದು ಬಹುಮಾನ ನೀಡಿ ಅಭಿನಂದಿಸಲಾಯಿತು. ಕಾಲೇಜು ವಿಭಾಗ-ಪ್ರಥಮ ಅಪೂರ್ವ ದ್ವಿತೀಯ ವಾಣಿಜ್ಯ, ದ್ವಿತೀಯ ಮಾನ್ಯ ಎಮ್ ಪ್ರಥಮ ವಾಣಿಜ್ಯ ವಿಭಾಗ, ಪ್ರೌಢಶಾಲಾ ವಿಭಾಗ ಕನ್ನಡ ಮಾಧ್ಯಮ-ಪ್ರಥಮ ಫಾತಿಮತ್ ಸಹ್‌ಲ ೧೦ನೇ ತರಗತಿ, ದ್ವಿತೀಯ- ಮೋಕ್ಷಿತ ೧೦ನೇ ತರಗತಿ, ಆಂಗ್ಲ ಮಾಧ್ಯಮ ವಿಭಾಗ-ಪ್ರಥಮ ಆಯಿಷತ್ ಫಾಹಿಮ ೮ನೇ ತರಗತಿ ಹಾಗೂ ದ್ವಿತೀಯ ಅನುಷಾ ಜೆ ೮ನೇ ತರಗತಿಯವರಿಗೆ ನಗದು ಬಹುಮಾನ ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.