ಸರ್ವೆ ಎಸ್.ಜಿ.ಎಂ ಪ್ರೌಢ ಶಾಲೆಯಲ್ಲಿ `ವಿದ್ಯಾಸೇತು’ ಪುಸ್ತಕ ವಿತರಣಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ವೃದ್ಧಿಸುವುದೇ ನಮ್ಮ ಉದ್ದೇಶ-ಭಾಸ್ಕರ ಕೋಡಿಂಬಾಳ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ ವತಿಯಿಂದ `ವಿದ್ಯಾಸೇತು ವಿದ್ಯಾಭಿಯಾನ’ದಡಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸಹಕಾರಿಯಾಗಬಲ್ಲ ಗಣಿತ, ವಿಜ್ಞಾನ, ಇಂಗ್ಲೀಷ್ ವಿಷಯಗಳಿಗೆ ಸಂಬಂಧಿಸಿದ ವಿದ್ಯಾಸೇತು ಪುಸ್ತಕಗಳ ವಿತರಣಾ ಕಾರ್ಯಕ್ರಮ ಸರ್ವೆ ಎಸ್‌ಜಿಎಂ ಪ್ರೌಢಶಾಲೆಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ ಅಧ್ಯಕ್ಷರಾದ ವಕೀಲರು, ಲೇಖಕರು ಆದ ಭಾಸ್ಕರ್ ಗೌಡ ಕೋಡಿಂಬಾಳ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ ಪುಸ್ತಕಗಳನ್ನು ನುರಿತ ಶಿಕ್ಷಣ ತಜ್ಞರು ಸಿದ್ದಪಡಿಸಿದ್ದು ಗ್ರಾಮೀಣ ಪ್ರದೇಶಗಳ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಶೈಕ್ಷಣಿಕ ಗುಣಮಟ್ಟವನ್ನು ವೃದ್ಧಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.

ರೋಟರಿ ಪೂರ್ವಾಧ್ಯಕ್ಷರಾದ ಚಂದ್ರಶೇಖರಮೂರ್ತಿ ಮಾತನಾಡಿ ಶಾಲಾ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಜೊತೆಯಾಗಿ ಶ್ರಮಿಸಬೇಕು ಎಂದರು.

ಅತಿಥಿಗಳಾಗಿದ್ದ ಕಲ್ಲಮ ಶ್ರೀ ಗುರು ರಾಘವೇಂದ್ರ ಮಠದ ವ್ಯವಸ್ಥಾಪಕ ಡಾ.ಸೀತಾರಾಮ್ ಭಟ್ ಕಲ್ಲಮ, ನಿವೃತ್ತ ಮುಖ್ಯ ಶಿಕ್ಷಕ ಶ್ರೀನಿವಾಸ್ ಎಚ್ ಬಿ, ಹಾಗೂ ಮುಂಡೂರು ಗ್ರಾ.ಪಂ ಸದಸ್ಯ ಕಮಲೇಶ್ ಸರ್ವೆದೋಳಗುತ್ತು ಅವರು ರೋಟರಿ ಕ್ಲಬ್‌ನ ಪುಸ್ತಕ ವಿತರಣೆ ಕಾರ್ಯಕ್ರಮದ ಬಗ್ಗೆ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ರೋಟರಿ ಕ್ಲಬ್ ಪುತ್ತೂರು ಸ್ವರ್ಣ ನಿಕಟಪೂರ್ವ ಅಧ್ಯಕ್ಷ ಸೆನೊರೀಟಾ ಆನಂದ್, ವೃತ್ತಿಪರ ನಿರ್ದೇಶಕರಾದ ವೆಂಕಟರಮಣ ಗೌಡ ಕಲ್ಲಾಜೆ, ರೋಟರಿ ಸಾರ್ಜೆಂಟ್ ಪ್ರವೀಣ್ ಕುಮಾರ್ ರೈ ಸಾಂತ್ಯ, ಕಾರ್ಯದರ್ಶಿ ಆನಂದ ಮೂವಪ್, ಶಾಲಾ ಆಡಳಿತ ಮಂಡಳಿ ಖಜಾಂಜಿ ಶಶಿಧರ್ ಎಸ್ ಡಿ, ಸದಸ್ಯ ಹಾಬಲ ರೈ ಮೇಗಿನಗುತ್ತು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸುರೇಶ್ ಆಚಾರ್ಯ ಭಕ್ತಕೋಡಿ, ಶಾಲಾ ಶಿಕ್ಷಕ-ಶಿಕ್ಷಕಿಯರು, ಸಿಬ್ಬಂದಿಗಳು, ಪೋಷಕರು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ ಶ್ರೀನಿವಾಸ್ ಸ್ವಾಗತಿಸಿದರು. ಶಾಲಾ ಸಂಚಾಲಕಿ ಡಾ.ಯಾದವಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.