ರಾಜು ಹೊಸ್ಮಠರವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದೀರೆಂಬ ಆರೋಪ -‌ ಸಂಘಟನೆಯಿಂದ ಹೊರ ಬಂದಿರುವ ಆರ್ಲಪದವಿನ ವ್ಯಕ್ತಿಯೊಬ್ಬರಿಗೆ ಬೆದರಿಕೆ ಕರೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಂಬೇಡ್ಕರ್ ಆಪತ್ಬಾಂಧವ ಟ್ರಸ್ಟ್‌ನ ಅಧ್ಯಕ್ಷ ರಾಜು ಹೊಸ್ಮಠ ಅವರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿ ೪ ತಿಂಗಳ ಹಿಂದೆ ಸಂಘಟನೆಯನ್ನು ಬಿಟ್ಟಿರುವ ಅಂಬೇಡ್ಕರ್ ಆಪತ್ಪಾಂಧವ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಹೇಮಂತ ಆರ್ಲಪದವು ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಫೋನ್ ಕರೆ ಮಾಡಿ ಬೆದರಿಕೆಯೊಡ್ಡಿದ್ದಾರೆ.

ಹೇಮಂತ ಆರ್ಲಪದವು ಅವರು ಅಂಬೇಡ್ಕರ್ ಆಪತ್ಬಾಂಧವ ಟ್ರಸ್ಟ್‌ನ ಮಾಜಿ ಅಧ್ಯಕ್ಷರಾಗಿದ್ದು ಕಳೆದ ನಾಲ್ಕೈದು ತಿಂಗಳಿಂದ ಸಂಘಟನೆಗೆ ರಾಜಿನಾಮೆ ನೀಡಿದ್ದಾರೆ. ಆದರೆ ನ.೯ರಂದು ರಾತ್ರಿ ಅಪರಿಚಿರೊಬ್ಬರು ಫೋನ್ ಕರೆ ಮಾಡಿ ನೀವು ರಾಜು ಹೊಸ್ಮಠ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದೀರಿ ನಿಮ್ಮನ್ನು ಮಂಗಳೂರಿನಲ್ಲಿ ನೋಡಿಕೊಳ್ಳುತ್ತೇನೆಂದು ಬೆದರಿಕೆಯೊಡ್ಡಿದ್ದಲ್ಲದೆ ಅಂಬೇಡ್ಕರ್ ಅವರ ಕುರಿತು ಕೀಳಾಗಿ ಮಾತನಾಡಿದ್ದಾರೆ ಎಂದು ಹೇಮಂತ್ ಆರ್ಲಪದವು ಅವರು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ದೂರು ಸ್ವೀಕರಿಸಿ ಇದೊಂದು ಅಸಂಜ್ಞೆಯ ಪ್ರಕರಣವಾಗಿರುವ ಕಾರಣ ನ್ಯಾಯಾಲಯದ ಅನುಮತಿ ಪಡೆಯುವಂತೆ ಹಿಂಬರಹ ನೀಡಿದ್ದಾರೆ. ಪ್ರಕರಣ ಕುರಿತು ರಾಜು ಹೊಸ್ಮಠ ಅವರ ಕೇಸಿಗೂ ನನಗೂ ಯಾವುದೇ ಸಂಬಂಧಿವಿಲ್ಲವೆಂದು ಹೇಮಂತ್ ಆರ್ಲಪದವು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.