ಹಿಂಜಾವೆ ಪುತ್ತೂರು ತಾಲೂಕು ಕಾರ್ಯದರ್ಶಿಯಾಗಿದ್ದ ಹರೀಶ್ಚಂದ್ರ ಪಡುಮಲೆಯವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಕಾರ್ಯದರ್ಶಿ ಹರಿಶ್ಚಂದ್ರ ಪಡುಮಲೆ ಯವರಿಗೆ ಹಿಂದು ಜಾಗರಣ ವೇದಿಕೆ ಪುತ್ತೂರು ವತಿಯಿಂದ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಅಧ್ಯಕ್ಷ ಜಗದೀಶ್ ನೆತ್ತರಕೆರೆ, ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ, ಬಡಗನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಆಳ್ವ ಗಿರಿಮನೆ ನುಡಿ ನಮನ ಸಲ್ಲಿಸಿದರು.
ಹಿಂದು ಜಾಗರಣ ವೇದಿಕೆ ಮಂಗಳೂರು ವಿಭಾಗ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಲ ನುಡಿನಮನ ಸಲ್ಲಿಸಿ ಮಾತನಾಡಿ ಹರಿಶ್ಚಂದ್ರ ಪಡುಮಲೆ ಒಬ್ಬ ಸಂಘಟನೆಯ ನಿಷ್ಟಾವಂತ ಕಾರ್ಯಕರ್ತನಾಗಿ ಹಗಲು ಇರುಳು ಎನ್ನದೆ ಸಂಘಟನೆ, ಧರ್ಮ, ಸಮಾಜಕ್ಕಾಗಿ ದುಡಿದವರು ಅವರ ಅಗಲುವಿಕೆ ನಮ್ಮೆಲ್ಲರಿಗೂ ಬಹಳಷ್ಟು ನೋವು ಮತ್ತು ನಷ್ಟ ಉಂಟುಮಾಡಿದೆ, ಅವರ ಆತ್ಮಕ್ಕೆ ಭಗವಂತನು ಸದ್ಗತಿ ನೀಡಲಿ,ಅವರ ಕನಸ್ಸು ನನಸು ಮಾಡುವ ದೃಷ್ಟಿಯಲ್ಲಿ ನಮ್ಮೆಲ್ಲ ಕಾರ್ಯಕರ್ತರು ಅವರು ಹಾಕಿದ ದಾರಿಯಲ್ಲಿ ನಡೆಯುವುದೇ ಅವರಿಗೆ ನಾವು ಮಾಡುವ ನಿಜವಾದ ಶ್ರದ್ಧಾಂಜಲಿ ಎಂದು ನಮನ ಸಲ್ಲಿಸಿದರು. ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಮಾತೃ ಸುರಕ್ಷಾ ಪ್ರಮುಖ್ ರಾಜೇಶ್ ಪಂಚೊಡಿ, ಹಿಂದು ಯುವವಾಹಿನಿ ಪ್ರಮುಖ್ ಪ್ರಶಾಂತ್ ಬಿಸಿ ರೋಡ್, ಪುತ್ತೂರು ತಾಲೂಕು ಅಧ್ಯಕ್ಷ ಅಶೋಕ್ ತ್ಯಾಗರಾಜ ನಗರ, ಉಪಾಧ್ಯಕ್ಷ ಶಶಿಕಾಂತ್ ಕೋರ್ಟ್ ರೋಡ್, ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ, ನಗರ ಅಧ್ಯಕ್ಷ ಪುಷ್ಪರಾಜ್ ದರ್ಬೆ, ಪ್ರಮುಖರಾದ ಸ್ವಸ್ತಿಕ್ ಸರ್ವೇ, ರಾಕೇಶ್ ಓಜಾಲ, ಗೀತೇಶ್, ಮನೀಶ್ ಬನ್ನೂರು, ಕಿರಣ್ ಬೆದ್ರಾಳ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.