ವಿಧಾನ ಪರಿಷತ್ ಚುನಾವಣೆ: ಡಾ| ಎಂ.ಎನ್.ಆರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಕರ್ನಾಟಕ ವಿಧಾನ ಪರಿಷತ್‍ಗೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ರಾಜಕೀಯ ಚಟುವಟಿಕೆಗಳು ಅರಂಭಗೊಂಡಿದೆ. ದಕ್ಷಿಣ ಕನ್ನಡ ದ್ವಿಸದಸ್ಯತ್ವ ಕ್ಷೇತ್ರದಿಂದ ಸಹಕಾರಿ ಕ್ಷೇತ್ರದ ದಿಗ್ಗಜ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಪಕ್ಷೇತರರಾಗಿ ಕಣಕ್ಕಿಳಿಯಳಿದ್ದಾರೆ ಎಂದು ತಿಳಿದು ಬಂದಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ರಾಜೇಂದ್ರ ಕುಮಾರ್ ರವರು ಕಳೆದ 27 ವರ್ಷಗಳಿಂದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿದ್ದಾರೆ. ವಿಧಾನ ಪರಿಷತ್‍ನಲ್ಲಿ ಸಹಕಾರ ಕ್ಷೇತ್ರದವರಿಗೂ ಆದ್ಯತೆ ನೀಡುವಂತೆ ಪ್ರತಿಪಾದಿಸಿದ್ದರು. ಈ ಹಿಂದೆ ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿದ್ದರೂ ಬಿಜೆಪಿ ಮತ್ತು ಜೆಡಿಎಸ್ ನಾಯಕರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಗ್ರಾ.ಪಂ.ಸದಸ್ಯರಲ್ಲಿ ಹೆಚ್ಚಿನವರು ಸಹಕಾರಿ ಕ್ಷೇತ್ರದ ಹಿನ್ನಲೆ ಉಳ್ಳವರಾಗಿದ್ದಾರೆ. ಗ್ರಾ.ಪಂ.ಮಹಿಳಾ ಸದಸ್ಯರಲ್ಲಿಯೂ ಬಹುತೇಕರು ನವೋದಯ ಸ್ವಸಹಾಯ ಸಂಘದಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ಗ್ರಾ.ಪಂ. ಸದಸ್ಯರು ಅಧಿಕೃತವಾಗಿ ಯಾವುದೇ ಪಕ್ಷದ ಚಿಹ್ನೆಯಿಂದ ಗೆದ್ದವರಲ್ಲ, ಡಾ| ರಾಜೇಂದ್ರ ಕುಮಾರ್ ಸ್ಪರ್ಧಿಸಿದರೆ ಅವರನ್ನು ಬೆಂಬಲಿಸಲೂಬಹುದು ಎನ್ನಲಾಗುತ್ತಿದೆ.

ಗ್ರಾಮ ಪಂಚಾಯತ್ ಸದಸ್ಯರ ಮತ್ತು ಸಹಕಾರ ಸಂಘಗಳಲ್ಲಿರುವ ಮಹಿಳೆಯರ ಹಿತರಕ್ಷಣೆಗಾಗಿ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧೆ
ಗ್ರಾಮ ಪಂಚಾಯತ್ ಸದಸ್ಯರ ಮತ್ತು ಸ್ವಸಹಾಯ ಸಂಘಗಳ ಮಹಿಳೆಯರ ಹಿತರಕ್ಷಣೆಗಾಗಿ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರವನ್ನು ಮಾಡಿದ್ದೇನೆ. ನಾನು ಯಾವುದೇ ಪಕ್ಷದ ನೆಲೆಯಲ್ಲಿ ಸ್ಪರ್ಧಿಸುತ್ತಿಲ್ಲ. ಸಹಕಾರಿ ಕ್ಷೇತ್ರದ ವತಿಯಿಂದ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ. ವಿಧಾನಪರಿಷತ್ತಿನಲ್ಲಿ ಸಹಕಾರಿ ರಂಗದಲ್ಲಿರುವ ಗ್ರಾಪಂ ಸದಸ್ಯರಿಗೆ ಮತ್ತು ಮಹಿಳೆಯರಿಗೆ ಧ್ವನಿ ಬೇಕಾಗಿದೆ. ಎಲ್ಲರ ಹಿತರಕ್ಷಣೆಗಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೇನೆ. ನವೆಂಬರ್ 17 ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ -ಡಾ|ಎಂ.ಎನ್. ರಾಜೇಂದ್ರ ಕುಮಾರ್, ಅಧ್ಯಕ್ಷರು, ಎಸ್‍ಸಿಡಿಸಿಸಿ ಬ್ಯಾಂಕ್

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.