ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಸಾಧನೆಗೆ ಸತತ 4ನೇ ಬಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಬನ್ನೂರು ರೈತರ ಸೇವಾ ಸಹಕಾರಿ ಸಂಘ ವಿಶೇಷ ಸಾಧನೆಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸತತ 4ನೇ ಬಾರಿ ಪ್ರಶಸ್ತಿಗೆ ಆಯ್ಕೆಯಾಗಿದೆ. 2020-21ನೇ ಸಾಲಿನ ಸಹಕಾರಿ ಸಮಘದ ಸಾಧನೆಯನ್ನು ಪರಿಗಣಿಸಿ ಅಡಿಟ್ ವರ್ಗೀಕರಣದಲ್ಲಿ ಎ. ಸ್ಥಾನ ಹೊಂದಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಕೊಡಲ್ಪಡುವ ಪ್ರಶಸ್ತಿಗೆ ಸಂಘವು ಭಾಜನವಾಗಿರುತ್ತದೆ.

ಪ್ರಶಸ್ತಿ ಬರಲು ಕಾರಣಕರ್ತರಾದವರಿಗೆ ಹೃತ್ಪೂರ್ವಕ ಕೃತಜ್ಞತೆಗಳು : ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತೀವ ಸಂತೋಷವಾಗಿದೆ. ನಮ್ಮ ಸಂಸ್ಥೆ ಸತತವಾಗಿ 4ನೇ ಬಾರಿಗೆ ಪ್ರಸಸ್ತಿಗೆ ಆಯ್ಕೆ ಮಾಡಲು ಕಾರಣಕರ್ತರಾದ ನಮ್ಮ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳಿಗೆ ಸಹಕಾರಿ ಸಂಘದ ಎಲ್ಲಾ ಸದಸ್ಯರುಗಳಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರಿಗೆ ಹಾಗೂ ಎಲ್ಲಾ ನಿರ್ದೇಶಕರುಗಳಿಗೆ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಹಾಗೂ ಎಲ್ಲಾ ಸಿಬ್ಬಂದಿವರ್ಗದವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅದ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ತಿಳಿಸಿದರು.

ನ.12ರಂದು ಪ್ರಶಸ್ತಿ ಪ್ರದಾನ
ನ.12ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಕಛೇರಿಯಲ್ಲಿ ನಡೆಯಲಿರುವ ಮಹಾಸಭೆಯಲ್ಲಿ ಎಸ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪ್ರಶಸ್ತಿ ವಿತರಿಸಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.