ಭಾರೀ ಮಳೆ: ಪೆರಿಯಶಾಂತಿಯಲ್ಲಿ ರಸ್ತೆಗೆ ಬಿದ್ದ ಮರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ನ.14ರ ರಾತ್ರಿ 1 ತಾಸು ಹೆದ್ದಾರಿ ಸಂಚಾರಕ್ಕೆ ತಡೆ

ನೆಲ್ಯಾಡಿ: ನ.14ರಂದು ರಾತ್ರಿ ಸುರಿದ ಭಾರೀ ಮಳೆಗೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯಲ್ಲಿ ಬೃಹತ್ ಗಾತ್ರದ ಮರವೊಂದು ಬುಡ ಸಮೇತ ಮುರಿದು ರಸ್ತೆಗೆ ಬಿದ್ದ ಪರಿಣಾಮ ಸುಮಾರು 1 ತಾಸು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆದಿದೆ.


ಹೆದ್ದಾರಿಗೆ ಅಡ್ಡವಾಗಿ ಮರಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 755ರಲ್ಲಿ ರಾತ್ರಿ 6.30ರಿಂದ 7.30ರ ತನಕ ಸುಮಾರು 1 ತಾಸು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಭಾರೀ ಮಳೆಯ ನಡುವೆಯೂ ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸುಮಾರು 1ತಾಸು ಹೆದ್ದಾರಿಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಭಾರೀ ಮಳೆಯಿಂದಾಗಿ ಈ ಭಾಗದಲ್ಲಿ ಹೆದ್ದಾರಿಯುದ್ದಕ್ಕೂ ಮಳೆ ನೀರು ನಿಂತ ಪರಿಣಾಮ ವಾಹನಗಳ ಸಂಚಾರಕ್ಕೂ ತೊಡಕು ಉಂಟಾಗಿತ್ತು. ದ್ವಿಚಕ್ರ ವಾಹನಗಳು ಮಳೆನೀರಿನಲ್ಲಿ ಸಂಚರಿಸಲು ಸಾಧ್ಯವಾಗದೇ ಪಲ್ಟಿಯಾಗಿರುವ ಘಟನೆಯು ನಡೆದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.