ಮುಕ್ರಂಪಾಡಿ; ಶ್ರೀ ಸತ್ಯನಾರಾಯಣ ಪೂಜೆಯ ಸುವರ್ಣ ಸಂಭ್ರಮದ ವಿಜ್ಞಾಪನಾ ಪತ್ರ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಮುಕ್ರಂಪಾಡಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ ಕಳೆದ 49 ವರ್ಷಗಳಿಂದ ನಡೆದುಕೊಂಡು ಬಂದಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಸುವರ್ಣ ಸಂಭ್ರಮದ ವಿಜ್ಞಾಪನಾ ಪತ್ರ ಬಿಡುಗಡೆ ನ. 14ರಂದು ಮುಕ್ರಂಪಾಡಿ ಸುಭದ್ರ ಸಭಾಮಂದಿರದಲ್ಲಿ ಜರಗಿತು.

ವಿಜ್ಞಾಪನಾ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಸುರೇಶ್ ಪುತ್ತೂರಾಯ, ಕಳೆದ 49 ವರ್ಷಗಳಿಂದ ನಿರಂತರವಾಗಿ ಶ್ರೀ ಸತ್ಯನಾರಾಯಣ ಪೂಜೆ ನಡೆದುಕೊಂಡು ಬಂದಿದ್ದು, ಈ ವರ್ಷ 50ನೇ ವರ್ಷದ ಕಾರ್ಯಕ್ರಮ ಆಚರಿಸುತಿದ್ದೇವೆ. 50ನೇ ವರ್ಷದ ಈ ಕಾರ್ಯಕ್ರಮ ಉತ್ತಮವಾಗಿ ನಡೆಯಬೇಕು ಎಂಬ ಹಿನ್ನೆಲೆಯಲ್ಲಿ ಸಾಕಷ್ಟು ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ. ಪುತ್ತೂರಿಗೆ ಇದರ ವಿಷಯ ತಿಳಿಯುವಂತಾಗಬೇಕು. ಶ್ರೀ ಸತ್ಯನಾರಾಯಣ ಪೂಜೆ ಇನ್ನಷ್ಟು ಸುಧೀರ್ಘವಾಗಿ ನಡೆದುಕೊಂಡು ಬರುವಂತಾಗಬೇಕು ಎಂದು ಶುಭಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಸೋಮಶೇಖರ್ ರೈ ಮಾತನಾಡಿ, 1971ರಲ್ಲಿ ಅಣ್ಣಪ್ಪಯ್ಯ ಅವರು ಮುಕ್ರಂಪಾಡಿಯಲ್ಲಿ ಸತ್ಯನಾರಾಯಣ ಪೂಜೆಯನ್ನು ಆರಂಭಿಸಿದರು. ಅಲ್ಲಿಂದ ಬಳಿಕ ಸಾಂಗವಾಗಿ ಪೂಜೆ ನಡೆದುಕೊಂಡು ಬರುತ್ತಿದೆ. ಇದೀಗ ೫೦ನೇ ವರ್ಷದ ಸಂಭ್ರಮದಲ್ಲಿದ್ದು, ಎಲ್ಲರ ಸಹಕಾರದ ನಿರೀಕ್ಷೆಯಲ್ಲಿ ವಿಜ್ಞಾಪನಾ ಪತ್ರ ಬಿಡುಗಡೆ ಮಾಡುತ್ತಿದ್ದೇವೆ ಎಂದರು.

ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಕಳೆದ 49 ವರ್ಷಗಳಿಂದ ಶ್ರದ್ಧಾ, ಭಕ್ತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ನಡೆದುಕೊಂಡು ಬರುತ್ತಿದೆ. ಈ ವರ್ಷ ನೆನಪಿನಲ್ಲಿ ಉಳಿಯುವಂತಾಗಲು ಸಮಿತಿ ರಚಿಸಿ, ಅದರಡಿ ಕೆಲಸ ಮಾಡುತ್ತಿದ್ದೇವೆ. ಫೆ. ೫ರಂದು ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಅಶ್ವತ್ಥಪೂಜೆ, ರಾತ್ರಿ ಶ್ರೀ ಸತ್ಯನಾರಾಯಣ ಪೂಜೆ ಜರುಗಿ ಬಳಿಕ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮರುದಿನ ಶ್ರೀ ಸತ್ಯನಾರಾಯಣ ಪೂಜೆಯ ಉದ್ಯಾಪನ, ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಅವರಿಂದ ಆಶೀರ್ವಚನ, ಬಳಿಕ ಕಟೀಲು ಮೇಳದಿಂದ ಯಕ್ಷಗಾನ ನಡೆಯಲಿದೆ. ಮೂರು ದಿನ ನಡೆಯುವ ಈ ಎಲ್ಲಾ ಕಾರ್ಯಕ್ರಮಗಳಿಗೆ ಸುಮಾರು ೧೫ ಲಕ್ಷ ರೂ. ಖರ್ಚು ಆಗಲಿದೆ ಎಂದು ಅಂದಾಜಿಸಿದ್ದೇವೆ ಎಂದರು.

ಸುಭದ್ರ ಸಭಾಮಂದಿರದ ಮಾಲಕ ಗಿರೀಶ್, ಸಮಿತಿಯ ಹರಿಕೃಷ್ಣ ಹಾಗೂ ಶ್ರೀಪಾದ ಉಪಸ್ಥಿತರಿದ್ದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕುಮಾರ್ ಮಾರ್ತ ಸ್ವಾಗತಿಸಿ, ಕಾರ್ಯದರ್ಶಿ ಸಂತೋಷ್ ಕೆ. ವಂದಿಸಿದರು. ಉದಯ್ ಕುಮಾರ್ ರೈ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.