ನ.20: ಸುದಾನದಲ್ಲಿ ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಉಡುಪಿ, ದ.ಕ ಜಿಲ್ಲಾ 40+ ವಯೋಮಿತಿಯ ಪುರುಷರ ಹಾಗೂ ಮಹಿಳೆಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಉಡುಪಿ ಮತ್ತು ದ.ಕ ಜಿಲ್ಲೆಯ ಆಟಗಾರರನ್ನೊಳಗೊಂಡ 40+ ವಯೋಮಿತಿಯ ಪುರುಷರ ಹಾಗೂ ಮಹಿಳೆಯರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನ.20ರಂದು ಪುತ್ತೂರು ಸುದಾನ ವಸತಿಯುತ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮಹಿಳಾ ಪಂದ್ಯಾಟದ ಉದ್ಘಾಟನೆ ಸಂಜೆ ಗಂಟೆ 5.30ಕ್ಕೆ ನಡೆಯಲಿದ್ದು ದ.ಕ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಸತೀಶ್ ಕುಮಾರ್ ಬಿ.ಎಸ್ ಉದ್ಘಾಟಿಸಲಿದ್ದಾರೆ. ರಾಜ್ಯ ಸಮಾಜ ಕಲ್ಯಾಣ ಮಂಡಳಿತ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ತಿಮ್ಮಮ್ಮ ನಾಯ್ಕ್, ಕೋಡಿಂಬಾಡಿ ರೈ ಎಸ್ಟೇಟ್‌ನ ಅಶೋಕ್ ಕುಮಾರ್ ರೈ, ದ.ಕ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್‌ನ ಖಜಾಂಜಿ ಇಬ್ರಾಹಿಂ ಗೂನಡ್ಕ, ನೆಲ್ಲಿಕಟ್ಟೆ ಮೆಸ್ಕಾಂನ ಶಾಖಾಧಿಕಾರಿ ಸುಂದರ ಕೆ ಉದ್ಯಮಿ ಪ್ರಸನ್ನ ಕುಮಾರ್ ಶೆಟ್ಟಿ ಸಿಝ್ಲರ್, ಉದಯ ಶೆಟ್ಟಿ ಚಿಕ್ಕಮಗಳೂರು ಭಾಗವಹಿಸಲಿದ್ದಾರೆ.

ಪುರುಷರ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮ ರಾತ್ರಿ ಗಂಟೆ 8.30ಕ್ಕೆ ನಡೆಯಲಿದ್ದು ರಾಮಕುಂಜ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಾಧಾಕೃಷ್ಣ ಕೂವೆಚ್ಚಾರು ಉದ್ಘಾಟಿಸಲಿದ್ದಾರೆ. ಪುತ್ತೂರು ವಾಲಿಬಾಲ್ ಎಸೋಸಿಯೇಶನ್‌ನ ಗೌರವಾಧ್ಯಕ್ಷ ರೆ| ವಿಜಯ ಹಾರ್ವಿನ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಪುತ್ತೂರು ಉಪವಿಭಾಗ ಡಿವೈಎಸ್ಪಿ ಗಾನ ಪಿ ಕುಮಾರ್, ದ.ಕ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್‌ನ ಕಾರ್ಯದರ್ಶಿ ಶಂಕರ ಶೆಟ್ಟಿ, ಕಡಬ ತಾಲೂಕು ವಾಲಿಬಾಲ್ ಎಸೋಸಿಯೇಶನ್ ಗೌರವಾಧ್ಯಕ್ಷ ಎಂ ಚಂದ್ರಹಾಸ ಶೆಟ್ಟಿ, ಮಂಗಳೂರು ಮೆಸ್ಕಾಂ ನಿರ್ದೇಶಕ ಕಿಶೋರ್ ಕುಮಾರ್ ಪುತ್ತೂರು,  ಯುವ ಉದ್ಯಮಿ ಸಹಜ್ ರೈ ಬಳಜ್ಜ ಪದ್ಮಶ್ರೀ ಸೋಲಾರ್ ಸಿಸ್ಟಮ್‌ನ ಮಾಲಕ ಸೀತಾರಾಮ ರೈ ಕೆದಂಬಾಡಿಗುತ್ತು ಭಾಗವಹಿಸಲಿದ್ದಾರೆ.

ಸನ್ಮಾನ ಕಾರ್ಯಕ್ರಮ-ಸಮಾರೋಪ
ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿ ಪಿ.ಎ ಜೋಸೆಫ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜಯರಾಮ ಗೌಡ, ಮಹಮ್ಮದ್ ಪರ್ಲಡ್ಕ ಮೊದಲಾದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಮಾಜಿ ರಾಷ್ಟ್ರೀಯ ವಾಲಿಬಾಲ್ ಆಟಗಾರ ಜುಲಿಯನ್ ಪೀಟರ್ ಲಂಡನ್, ಕಾಪು ಪೊಲೀಸ್ ನಿರೀಕ್ಷಕ ಪ್ರಕಾಶ್, ಉಡುಪಿ ಡಿವೈಎಸ್ಪಿ ರಾಘವೇಂದ್ರ, ಬಂಟ್ವಾಳ ತಾಲೂಕು ವಾಲಿಬಾಲ್ ಎಸೋಸಿಯೇಶನ್ ಗೌರವಾಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಅಧ್ಯಕ್ಷ ಸುಪ್ರೀತ್ ಆಳ್ವ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪುತ್ತೂರು ತಾಲೂಕು ವಾಲಿಬಾಲ್ ಎಸೋಸಿಯೇಶನ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.