ಜಿಡೆಕಲ್ಲು : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಸರಕಾರಿ ಪ್ರಥಮ ದರ್ಜೆ ಕಾಲೇಜು ಜಿಡೆಕಲ್ಲು ಪುತ್ತೂರು ಇಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ 4ನೇ ದಿನವಾದ ಗುರುವಾರ ಕಾಲೇಜಿನ ಪ್ಲೇಸ್ಮೆಂಟ್  ಘಟಕದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತಯಾರಿಯಲ್ಲಿ ಗ್ರಂಥಾಲಯದ ಉಪಯೋಗ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ಲೇಸ್ಮೆಂಟ್  ಸೆಲ್ ಸಂಚಾಲಕರಾದ ಪ್ರೊ.ಪದ್ಮನಾಭ   ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಅಧ್ಯಯನದ ನಂತರದ ಉದ್ಯೋಗಾವಕಾಶಗಳ  ಕುರಿತು ಸವಿವರವಾದ ಮಾಹಿತಿ ನೀಡಿ, ಪರೀಕ್ಷಾ ತಯಾರಿ, ಉನ್ನತ ವ್ಯಾಸಂಗದಲ್ಲಿ  ಗ್ರಂಥಾಲಯದ ಪಾತ್ರ ಕುರಿತು ಮಾರ್ಗದರ್ಶನ ಮಾಡಿದರು. ಜೊತೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ಸಿಗುವ ಸವಲತ್ತು ಮತ್ತು ವಿದ್ಯಾರ್ಥಿವೇತನಗಳು ಹಾಗೂ ಖಾಸಗಿ ಸಂಘ-ಸಂಸ್ಥೆಗಳು ಕೊಡಮಾಡುವ ವಿದ್ಯಾರ್ಥಿವೇತನಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಗ್ರಂಥಪಾಲಕ ಶ್ರೀ ರಾಮಚಂದ್ರ ಸ್ವಾಗತಿಸಿ ವಂದಿಸಿದರು. ವೇದಿಕೆಯಲ್ಲಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಜ್ಯೋತಿ   ಪಿ.  ರೈ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.