ಬೆಟ್ಟಂಪಾಡಿ: ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಉತ್ಸವಕ್ಕೆ ಚಾಲನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಇಂದು ರಾತ್ರಿ `ಬೆಟ್ಟಂಪಾಡಿ ಬೆಡಿ’ ನಾಳೆ ದೇವರ ದರ್ಶನ ಬಲಿ

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವವು ಸೀಮೆಯ ಮೊದಲ ಜಾತ್ರೋತ್ಸವವಾಗಿದ್ದು, ನ. 19ರಂದು ಜಾತ್ರೋತ್ಸವಕ್ಕೆ ಚಾಲನೆ ದೊರೆತಿದೆ. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ನವಕ ಕಲಶಾಭಿಷೇಕ, ತುಲಾಭಾರ ಸೇವೆ ನಡೆಯಿತು.

 

ಮಧ್ಯಾಹ್ನ ಮಹಾಪೂಜೆಯಾಗಿ ದೇವರ ಬಲಿ ಜರಗಿ ಪ್ರಸಾದ ವಿತರಣೆಯಾಗಿ ಬಳಿಕ ಬ್ರಹ್ಮಸಮಾರಾಧನೆ ನಡೆಯಿತು. ಸಾವಿರಕ್ಕೂ ಮಿಕ್ಕಿ ಭಕ್ತಾಭಿಮಾನಿಗಳು ಅನ್ನಪ್ರಸಾದ ಸ್ವೀಕರಿಸಿದರು. ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ಕುಮಾರ್ ರೈ ಗುತ್ತು, ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಸದಸ್ಯರು, ಊರಪರವೂರ ಭಕ್ತಾಭಿಮಾನಿಗಳು ಪಾಲ್ಗೊಂಡರು. ನ. 20  ರಂದು ಬೆಳಿಗ್ಗೆ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ರಾಜಾಂಗಣದಲ್ಲಿ ಮಹಾಪ್ರಸಾದ ವಿತರಣೆ ನಡೆಯಲಿದೆ. ಮಂತ್ರಾಕ್ಷತೆಯಾಗಿ ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ನೆರವೇರಲಿದೆ. ರಾತ್ರಿ ದೇವರ ಮಹಾಪೂಜೆಯಾಗಿ ಜಠಾಧಾರಿ ದೈವದ ಭಂಡಾರ ತೆಗೆದು ಶ್ರೀ ಜಠಾಧಾರಿ ಮಹಿಮೆ ನಡೆಯಲಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.