ರಾಮಕುಂಜ ಪದವಿ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಸಾಧಕ ಉಪನ್ಯಾಸಕರಿಗೆ ಗೌರವಾರ್ಪಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಶಿಕ್ಷಣದಿಂದ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ: ಕಶೆಕೋಡಿ ಸೂರ್ಯನಾರಾಯಣ ಭಟ್

ರಾಮಕುಂಜ: ಚಿಕ್ಕಪುಟ್ಟ ಸಾಧನೆಯಿಂದಲೇ ದೊಡ್ಡ ಸಾಧನೆಗೆ ಸ್ಪೂರ್ತಿ, ಸಾಧಕರ ಜೀವನ ನಮಗೆ ಮಾರ್ಗದರ್ಶನವಾಗಲಿ, ಎಲ್ಲದಕ್ಕೂ ಮೂಲ ಕಾರಣ ಶಿಕ್ಷಣ, ಶಿಕ್ಷಣದಿಂದಲೇ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದರು.


ಅವರು ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನಲ್ಲಿ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಸಾಧಕ ಉಪನ್ಯಾಸಕರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಮಾತನಾಡಿದರು. ಮುಖ್ಯ ಅಭ್ಯಾಗತರಾಗಿದ್ದ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ಮಂಗಳೂರು ಎಂಆರ್‌ಪಿಎಲ್ ಕಂಪನಿಯ ಉದ್ಯೋಗಿ ಸ್ವರಾಜ್ ರೈಯವರು ಮಾತನಾಡಿ, ಸಾಧನೆಯ ಹಿಂದಿನ ಶಕ್ತಿಯಾಗುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದರು. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸಂಚಾಲಕ ಟಿ.ನಾರಾಯಣ ಭಟ್‌ರವರು, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಕುರಿತಂತೆ ಮಾತನಾಡಿದರು. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು.

ಗೌರವಾರ್ಪಣೆ:
ಸಿ.ಎಸ್. ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸ್ವರಾಜ್ ರೈ, ಸಿ.ಎ.ಯ ಮೊದಲ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಶರಧಿ.ಕೆ, ಕೆ.ಸೆಟ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಉಪನ್ಯಾಸಕರಾದ ಸುಜಿತ್ ಕುಮಾರ್, ಶರತ್ ಹಾಗೂ ಮಂಗಳೂರು ವಿವಿ ಕನ್ನಡ ಸ್ನಾತಕೋತ್ತರ ವಿಭಾಗದಲ್ಲಿ ಮೊದಲ ರ್‍ಯಾಂಕ್ ಪಡೆದ ಸುರಕ್ಷಿತ ಶೆಟ್ಟಿಯವರಿಗೆ ಗೌರವಾರ್ಪಣೆ ಹಾಗೂ ಪ್ರಥಮ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಪ್ರಾಂಶುಪಾಲ ಗಣರಾಜ ಕುಂಬ್ಳೆಯವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪನ್ಯಾಸಕಿ ಸುಜಾತ ವಂದಿಸಿದರು. ಉಪನ್ಯಾಸಕ ಗುರುಕಿರಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.