ಖಾಸಗಿ ನ್ಯೂಸ್ ಚಾನೆಲ್‌ನ ದ.ಕ. ಜಿಲ್ಲಾ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ತಪ್ಪಿತಸ್ಥತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ

ಮಂಗಳೂರು: ಕನ್ನಡ ಖಾಸಗಿ ನ್ಯೂಸ್ ಚಾನೆಲ್‌ನ ದ.ಕ ಜಿಲ್ಲಾ ವರದಿಗಾರನೋರ್ವನ ಮೇಲೆ ನ.22ರಂದು ಸಂಜೆ ಮಾರಣಾಂತಿಕ ಹಲ್ಲೆ ನಡೆದಿದೆ. ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ಸುಖಪಾಲ್ ಪೊಳಲಿರವರು ಹಲ್ಲೆಗೊಳಗಾದ ಪತ್ರಕರ್ತ. ಘಟನೆಗೆ ಸಂಬಂದಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ವ್ಯಕ್ತಿಯೊಬ್ಬ ಏಕಾಏಕಿ ಬಂದು ಸುಖ್‌ಪಾಲ್ ಪೊಳಲಿರವರ ಮೇಲೆ ಮಾರಾಕಾಯುಧದಿಂದ ತಲೆಯ ಭಾಗಕ್ಕೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆ ನಡೆಸಿದ ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದ್ದು ವೈಯಕ್ತಿಕ ವಿಚಾರದ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ ಸುಖ್‌ಪಾಲ್ ಪೊಳಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉರ್ವ ಠಾಣೆಯಲ್ಲಿ ಐಪಿಸಿ 307ರ ಪ್ರಕಾರ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ 324, 341 ಐಪಿಸಿ ಅಡಿಯಲ್ಲಿ ಪ್ರತಿ ದೂರು ಸಹ ದಾಖಲಿಸಲಾಗಿದೆ.

                                        ಹಲ್ಲೆಗೊಳಗಾದ ವರದಿಗಾರ ಸುಖ್‌ಪಾಲ್ ಪೊಳಲಿ

ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ಸುಖಪಾಲ್ ಪೊಳಲಿ ರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ಪೊಲೀಸ್ ಆಯುಕ್ತರನ್ನು ನ.23ರಂದು ಮಧ್ಯಾಹ್ನ 1.30 ಗಂಟೆಗೆ ಅವರ ಕಛೇರಿಯಲ್ಲಿ ಭೇಟಿ ಮಾಡಿ ತಪ್ಪಿತಸ್ಥತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.